ಹನೂರು:ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಪಿಡಬ್ಲ್ಯೂಡಿ ಅಥಿತಿ ಗೃಹದ ಮುಂಭಾಗ ಅರ್ಹ ಫಲಾನುಭವಿಗಳಿಗೆ 36 ಹೊಲಿಗೆ ಯಂತ್ರಗಳನ್ನು ಶಾಸಕ ಎಂ.ಆರ್.ಮಂಜುನಾಥ್ ಅವರು ವಿತರಣೆ ಮಾಡಿದರು.
ಇದೇ ವೇಳೆ ಮಾತನಾಡಿದ ಶಾಸಕ ಎಂ.ಆರ್ ಮಂಜುನಾಥ್ ಅವರು ಮಹಿಳೆಯರು ಆರ್ಥಿಕವಾಗಿ ಸ್ವಯಂ ಉದ್ಯೋಗದಿಂದ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುವ ಮೂಲಕ ಮಹಿಳೆಯರು ಹೊಲಿಗೆ ಯಂತ್ರವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ವ್ಯವಸ್ಥಾಪಕರಾದ ಹೆ.ಚ್ ಶೋಭಾ,ಸಹಾಯಕ ಅಭಿವೃದ್ಧಿ ಅಧಿಕಾರಿಗಳಾದ ನಂಜುಂಡ ಸ್ವಾಮಿ,ಶಿವಣ್ಣ ಹಾಗೂ ಇನ್ನಿತರ ಅಧಿಕಾರಿಗಳು ಸಿಬ್ಬಂದಿ ವರ್ಗದವರಿಗೆ ಉಪಸ್ಥಿತರಿದ್ದರು.
ವರದಿ:ಉಸ್ಮಾನ್ ಖಾನ್