ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಾ.10-11ರಂದು ಭದ್ರಾವತಿಯಲ್ಲಿ ಶರಣ ಸಾಹಿತ್ಯ ಸಮ್ಮೇಳನದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ.ಬಿ.ಜಿ ಧನಂಜಯ ಆಯ್ಕೆ

ಭದ್ರಾವತಿ:ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕವು ಶ್ರೀಬಸವೇಶ್ವರ ಧರ್ಮಸಂಸ್ಥೆ ಹಾಗೂ ಕದಳಿ ವೇದಿಕೆ ಸಹಯೋಗದಲ್ಲಿ ಮಾ.10, 11ರಂದು ಶ್ರೀ ಬಸವೇಶ್ವರ ಸಭಾ ಭವನದಲ್ಲಿ “ಭದ್ರಾವತಿ ತಾಲ್ಲೂಕು 7ನೇ ಶರಣ ಸಾಹಿತ್ಯ ಸಮ್ಮೇಳನ”ಆಯೋಜಿಸಲಾಗಿದೆ ಎಂದು ಶರಣ ಸಾಹಿತ್ಯ ಪರಿಷತ್ತು ತಾಲ್ಲೂಕು ಅಧ್ಯಕ್ಷ ಎನ್.ಎಸ್.ಮಲ್ಲಿಕಾರ್ಜುನಯ್ಯ ತಿಳಿಸಿದರು.
ಹಳೇನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಮಾ.10ರ ಭಾನುವಾರ ಬೆಳಿಗ್ಗೆ
8.30ಕ್ಕೆಧ್ವಜಾರೋಹಣ ನೆರವೇರಲಿದೆ ತಹಶೀಲ್ದಾರ್ ಕೆ.ಆರ್.ನಾಗರಾಜ್ ರಾಷ್ಟ್ರಧ್ವಜಾರೋಹಣ,ಹಿರಿಯ ಪತ್ರಕರ್ತ ಎನ್.ಬಾಬು ನಾಡಧ್ವಜಾರೋಹಣ, ಅ.ಭಾ.ಶ.ಸಾ.ಪರಿಷತ್ ತಾಲ್ಲೂಕು ಅಧ್ಯಕ್ಷ ಎನ್.ಎಸ್.ಮಲ್ಲಿಕಾರ್ಜುನಯ್ಯಪರಿಷತ್ತಿನ ಧ್ವಜಾರೋಹಣವನ್ನು ನೆರವೇರಿಸುವರು.
ಬೆ.9.30ಕ್ಕೆ ಪರಿಷತ್ತಿನ ಯುವ ವೇದಿಕೆ ಸಹಯೋಗದಲ್ಲಿ ಸಂಘಟನೆಯಲ್ಲಿ ಯುವಕರ ಪಾಲ್ಗೊಳ್ಳುವಿಕೆ ವಿಷಯ ಕುರಿತು ಸಂವಾದ ನಡೆಯಲಿದೆ ಮಧ್ಯಾಹ್ನ 3.30ಕ್ಕೆ ಪರಿಷತ್ತಿನ ಸಂಘಟನೆ ಹಾಗೂ ಶರಣ ಸಾಹಿತ್ಯ ಸಂಸ್ಕೃತಿಯ ಪ್ರಚಾರ ಕುರಿತು ಸಂವಾದ ನಡೆಯಲಿದೆ.ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ರಾಷ್ಟ್ರೀಯ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಮಾರ್ಗದರ್ಶನ ನೀಡಲಿದ್ದು,ಜಿಲ್ಲಾಧ್ಯಕ್ಷ ಎಚ್.ಎನ್.ಮಹಾರುದ್ರ,ಜಿಲ್ಲಾ ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಗಾಯತ್ರಿ ಪಾಟೀಲ್ ಸೇರಿದಂತೆ ವಿವಿಧ ತಾಲ್ಲೂಕು ಅಧ್ಯಕ್ಷರುಗಳು ಉಪಸ್ಥಿತರಿರಲಿದ್ದಾರೆ.
ಸಂಜೆ 5.30ಕ್ಕೆ ಅಧಿಕೃತವಾಗಿ ಉದ್ಘಾಟನಾ ಸಮಾರಂಭ ನಡೆಯಲಿದ್ದು,ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ರಾಷ್ಟ್ರೀಯ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಡಾ.ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಸಾನ್ನಿದ್ಯವಹಿಸಲಿದ್ದಾರೆ.ಶಾಸಕ ಹಾಗೂ ಕರ್ನಾಟಕ ಭೂ ಸೇನಾ ನಿಗಮದ ಅಧ್ಯಕ್ಷ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಭದ್ರಾವತಿ ನಿವಾಸಿ ಹಾಗೂ ಹೊನ್ನಾಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ.ಧನಂಜಯ ಆಯ್ಕೆಗೊಂಡಿದ್ದಾರೆ. ನಿಕಟಪೂರ್ವ ಸಮ್ಮೇಳನಾಧ್ಯಕ್ಷೆ ಡಾ||ವೀಣಾಭಟ್, ವಿಶೇಷ ಆಹ್ವಾನಿತರಾಗಿ ಸಂಸದ ಬಿ.ವೈ.ರಾಘವೇಂದ್ರ,ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ,ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್,ತಹಶೀಲ್ದಾರ್ ಕೆ.ಆರ್ ನಾಗರಾಜ್,ಡಿವೈಎಸ್ಪಿ ನಾಗರಾಜ್ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.ಸಂಜೆ 7.30 ರಿಂದ “ಸಾಂಸ್ಕೃತಿಕ ನಾಯಕ ಬಸವಣ್ಣ”ವಿಷಯ ಕುರಿತು ಡಾ.ಅವಿನಾಶ್ ಕವಿ ಉಪನ್ಯಾಸ ನೀಡಲಿದ್ದಾರೆ ಎಂದರು.
ಮಾ.11ರಂದು ಬೆಳಗ್ಗೆ 7 ಗಂಟೆಗೆ ಸಾಮೂಹಿಕ ಇಷ್ಟಲಿಂಗ ಪೂಜೆ,8.30ಕ್ಕೆ ಧ್ವಜಾರೋಹಣ, ಸಂಜೆ 4 ಗಂಟೆಗೆ ಸಂವಾದ, ಸಂಜೆ 5.30 ರಿಂದ ಆರ್ಥಿಕ ಅಭಿವೃದ್ಧಿ-ವಚನಕಾರರ ಮಾರ್ಗ ಕುರಿತು ಅನುಭವ ಮಂಟಪ ಕಾರ್ಯಕ್ರಮ ನಡೆಯಲಿದೆ.ಸಂಜೆ 7 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಶಿಕಾರಿಪುರ ವಿರಕ್ತಮಠದ ಮ.ನಿ.ಪ್ರ.ಚನ್ನಬಸವ ಸ್ವಾಮೀಜಿ ಸಾನಿಧ್ಯವಹಿಸಲಿದ್ದಾರೆ. ಪರಿಷತ್ ತಾಲ್ಲೂಕು ಆಧ್ಯಕ್ಷ ಎನ್.ಎಸ್ ಮಲ್ಲಿಕಾರ್ಜುನಯ್ಯ ಅಧ್ಯಕ್ಷತೆ ವಹಿಸಲಿದ್ದು,ಡಾ.ಶುಭಮರವಂತೆ ಸಮಾರೋಪ ನುಡಿ ನುಡಿಯಲಿದ್ದಾರೆ.ಸಮ್ಮೇಳನದ ಸರ್ವಾಧ್ಯಕ್ಷ ಡಾ.ಬಿ.ಜಿ.ಧನಂಜಯ, ಶಾಸಕ ಬಿ.ಕೆ.ಸಂಗಮೇಶ್ವರ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಅ.ಭಾ.ಶ.ಸಾ.ಪರಿಷತ್ ಜಿಲ್ಲಾಧ್ಯಕ್ಷ ಎಚ್.ಎನ್.ಮಹಾರುದ್ರ ಮಾತನಾಡಿ,12ನೇ ಶತಮಾನದ ಚಿಂತನೆಗಳು ಮತ್ತು ಕೊಡುಗೆಗಳನ್ನು ತಿಳಿಯಲು,ತಿಳಿಸಲು ಶರಣ ಸಾಹಿತ್ಯ ಸಮ್ಮೇಳನ ಉಪಯುಕ್ತವಾಗಿದೆ.ಆದ್ದರಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿಮಾಡಿದರು.
ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಶರಣ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಜಗದೀಶ್ ಕವಿ,ಕೋಶಾಧ್ಯಕ್ಷ ಜಿ.ಎಂ.ಮಲ್ಲಿಕಾರ್ಜುನ, ಸಮಾಜದ ಪ್ರಮುಖರಾದ ಬಾರಂದೂರು ಪ್ರಕಾಶ್, ಕತ್ತಲಗೆರೆ ತಿಮ್ಮಪ್ಪ,ವಿರೂಪಾಕ್ಷಪ್ಪ,ರಾಜಶೇಖರ, ಕದಳಿ ವೇದಿಕೆ ಅಧ್ಯಕ್ಷೆ ಮಲ್ಲಿಕಾಂಬ ವಿರೂಪಾಕ್ಷಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ:ಕೆ ಆರ್ ಶಂಕರ್ ಭದ್ರಾವತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ