ಭದ್ರಾವತಿ:ಮಾರ್ಚ್ 08 ರಂದು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಭದ್ರಾವತಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.
ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ.ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ ಚನ್ನಪ್ಪನವರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.