ಕಲಬುರಗಿ:ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರಂತಹ ಮಾತನಾಡುವ ಗೊಂಬೆಗಳನ್ನು ಎದುರಿಗೆ ಇಟ್ಟುಕೊಂಡು ಭಾರತೀಯ ಜನತಾ ಪಾರ್ಟಿ ರಾಜಕೀಯ ಬೇಳೆ ಬೇಯಿಸುವ ಕಾರ್ಯದಲ್ಲಿ ತೊಡಗಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಕಾರ ವಠಾರ ಟೀಕಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರತಿ ಬಾರಿ ಹವಣಿಸುತ್ತಿದ್ದು ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವು ಶ್ರೇಷ್ಠವಾಗಿದ್ದು,ಜಗತ್ತು ಸಂವಿಧಾನವನ್ನು ಮೆಚ್ಚಿಕೊಂಡಿದೆ.ಆದರೆ ಕೇಂದ್ರ ಸಚಿವರೆನಿಸಿಕೊಂಡವರು ಅದರ ಅರಿವೆ ಇಲ್ಲ ಎನ್ನುವಂತೆ ಮಾತನಾಡುವುದು ಖಂಡನೀಯವಾಗಿದ್ದು,ಸಚಿವ ಸಂಪುಟದಿಂದ ಕೈಬಿಡಬೇಕು ಎಂದು
ಸಂವಿಧಾನವನ್ನೇ ಕೀಳಾಗಿ ಕಾಣುವ ಮನೋಸ್ಥಿತಿ ಅನಂತಕುಮಾರ ಹೆಗಡೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ರೀತಿಯಲ್ಲಿ ಹೇಳಿಕೆಯನ್ನು ನೀಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವ ಅನಂತಕುಮಾರ ಹೆಗಡೆ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಗೌರವವನ್ನು ನೀಡದೆ ಅತೀರೇಕದ ವರ್ತನೆ ತೋರುತ್ತಿದ್ದಾರೆ ಹಾಗಾಗಿ ಅವರನ್ನು ತಕ್ಷ ಣ ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ.
ಸಭ್ಯರ ಮತ್ತು ಪ್ರಜ್ಞಾವಂತರ ನಾಡು ಕೊಡಗಿನಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಕೇಂದ್ರ ಸಚಿವರು ತಮ್ಮ ಸ್ಥಾನಕ್ಕೆ ಅಗೌರವ ತೋರಿದ್ದಾರೆ. ಸಚಿವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಮತ್ತು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.