ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೋಗಳಿ ಗ್ರಾಮದಲ್ಲಿ ಸರಳ ಸಾಮೂಹಿಕ ವಿವಾಹಗಳು

ನೂತನ ದಂಪತ್ಯಕ್ಕೆ ಕಾಲಿಟ್ಟ ನವ ಜೋಡಿಗಳು…

ಕೊಟ್ಟೂರು ತಾಲೂಕಿನ ಕೋಗಳಿ ಗ್ರಾಮದಲ್ಲಿ 11 ಮಾರ್ಚ್ 2024 ಸೋಮವಾರ ಶ್ರೀ ನಂದೀಶ್ವರ ಸ್ವಾಮಿಯ ರಥೋತ್ಸವದ ಪ್ರಯುಕ್ತ ಇಂದು ಕೋಗಳಿ ಗ್ರಾಮದಲ್ಲಿ ಶ್ರೀ ನಂದೀಶ್ವರ ಸೇವಾ ಸಮಿತಿ ಮತ್ತು ಸಮಸ್ತ ದೈವಸ್ತರ ಸಹಯೋಗದಲ್ಲಿ ಸರಳ ಸಾಮೂಹಿಕ ವಿವಾಹಗಳನ್ನು ಹಮ್ಮಿಕೊಳ್ಳಲಾಗಿತ್ತು,
ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನವಲಿ ಮಠದ ಷ.ಬ್ರ.ಶ್ರೀ ಶ್ರೀ ಶಿವಲಿಂಗ ರುದ್ರಮುನಿ ಶಿವಾಚಾರ್ಯ ಮಹಾ ಸ್ವಾಮಿಗಳು,ಹಂಪಸಾಗರ ಇವರು ದಿವ್ಯ ಸಾನಿಧ್ಯವನ್ನು ವಹಿಸಿ,ನೂತನ ದಂಪತಿಗಳ ದಾಂಪತ್ಯ ಜೀವನದಲ್ಲಿ ಅನೇಕ ಕಷ್ಟಗಳು ಬರುತ್ತವೆ.ಅವುಗಳನ್ನು ದಂಪತಿಗಳಿಬ್ಬರು ಜೊತೆಗೂಡಿ ಎದುರಿಸಿ,ಜೀವನವೆಂಬ ಭವ ಸಾಗರವನ್ನು ದಾಟಬೇಕು,ಸುಖ ಸಂಸಾರದಲ್ಲಿ ಸಂತೋಷ ಕಾಣಬೇಕು ಎಂದು ಹೇಳಿ ಶುಭ ಹಾರೈಸಿ ಆಶೀರ್ವಚನ ನೀಡಿದರು.
ಹಗರಿಬೊಮ್ಮನಹಳ್ಳಿ ಕ್ಷೇತ್ರದ ಜನಪರ ಶಾಸಕರಾದ ಶ್ರೀ ಕೆ ನೇಮಿರಾಜ್ ನಾಯ್ಕ್,ಮಾತನಾಡಿ ಆಧುನಿಕ ಜಗತ್ತಿನಲ್ಲಿ ಸರಳ ಸಾಮೂಹಿಕ ಮದುವೆಗಳ ಅವಶ್ಯಕತೆ ಇದ್ದು,ಕಡು ಬಡ ಕುಟುಂಬಗಳ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವಲ್ಲಿ ಸಹಾಯಕವಾಗಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೋಗಳಿ ಗ್ರಾಮದ ಮುಖಂಡರಾದ ಕೆ ಎನ್ ಸಿದ್ದಲಿಂಗನಗೌಡ್ರು,ಜೆಡಿಎಸ್ ತಾಲೂಕು ಅಧ್ಯಕ್ಷ ವೈ ಮಲ್ಲಿಕಾರ್ಜುನ,ಎಂ ಮಹೇಶಪ್ಪ,ಟಿ ಶಿವರುದ್ರಪ್ಪ,ಎಸ್ ಎಂ ಕೊಟ್ರಯ್ಯ,ಮರುಳಸಿದ್ದಯ್ಯ, ಕಂಬಿ ಕೊಟ್ರಪ್ಪ ಹಾಗೂ ಶ್ರೀ ನಂದೀಶ್ವರ ಸೇವಾ ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಕ್ಷರಿ ಸಂಗೀತ ಪಾಠಶಾಲಾ ಮಕ್ಕಳ ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮವನ್ನು ನೆಡಸಿಕೊಟ್ಟರು.
ಡಿ ಬಸವರಾಜ್ ಕಾರ್ಯಕ್ರಮವನ್ನು ನಿರೂಪಿಸಿದರು,ನಂದಿನಿ ಅಕ್ಷತಾ ಸಂಗಡಿಗರು ಪ್ರಾರ್ಥನಾ ಗೀತೆ ಹಾಡಿದರು,ಹೆಚ್ ಎಂ ಈಶಣ್ಣ ವಂದನಾರ್ಪಣೆ ಮಾಡಿದರು.

ವರದಿ:ಮಹೇಶ್ ಕುಮಾರ್,ಕೊಟ್ಟೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ