ಕೊಪ್ಪಳ:ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ಟಿಕೆಟ್ ತಪ್ಪಿದ್ದಕ್ಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸಂಗಣ್ಣ ಅವರ ಮುಂದೆ ಕಣ್ಣೀರಿಟ್ಟರು.
ಆರೆಸ್ಸೆಸ್ ಕುತಂತ್ರ ಮತ್ತು ಪಕ್ಷದ ಕೆಲ ನಾಯಕರ ಕುಮ್ಮಕ್ಕಿನಿಂದ ಸಂಗಣ್ಣ ಅವರಿಗೆ ಟಿಕೆಟ್ ಕೈ ತಪ್ಪಿದೆ. ಯಾರಿಗೂ ಗೊತ್ತೇ ಇಲ್ಲದ, ಪಕ್ಷಕ್ಕಾಗಿ ದುಡಿಯದ ವ್ಯಕ್ತಿಗೆ ಟಿಕೆಟ್ ನೀಡಿದ್ದು ಸರಿಯಲ್ಲ.ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಅನುಕೂಲ ಮಾಡಿಕೊಡಲೆಂದು ನಮ್ಮವರೇ ಸಂಚು ರೂಪಿಸಿ ದುರ್ಬಲ ಅಭ್ಯರ್ಥಿಗೆ ಟಿಕೆಟ್ ಸಿಗುವಂತೆ ಮಾಡಿದ್ದಾರೆ.ಇದರಲ್ಲಿ ಆರೆಸ್ಸೆಸ್ ನಾಯಕರ ಕೈವಾಡವಿದೆ’ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಯಕರ್ತರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಂಗಣ್ಣ, ‘ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಹೊಸಬರಿಗೆ ಅವಕಾಶ ಮಾಡಿಕೊಡುವ ಕಾರಣಕ್ಕೆ ಬಸವರಾಜಗೆ ಟಿಕೆಟ್ ಕೊಟ್ಟಿರಬಹುದು.ಪಕ್ಷದ ನಿರ್ಧಾರವನ್ನು ಗೌರವಿಸುತ್ತೇನೆ. ಕಾರ್ಯಕರ್ತರಿಗೆ ಸಾಕಷ್ಟು ನೋವಾಗಿದೆ’ಎಂದು ಭಾವುಕರಾದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.