ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಯಾಗಾಪುರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂದುಳಿದ ಸಮುದಾಯದ ಮಾತಂಗ ಸಮಾಜದ ಮಹಿಳೆ ಮಾಳಮ್ಮಗಂಡ ಮಲ್ಲಪ್ಪ 85 ವರ್ಷದ ವಯಸ್ಸಿನ ಮಹಿಳೆ ಮೃತಪಟ್ಟಿದ್ದು ಈ ಗ್ರಾಮದಲ್ಲಿ ರುದ್ರಭೂಮಿ ಇಲ್ಲದ ಕಾರಣ ರಸ್ತೆಯ ಪಕ್ಕದಲ್ಲಿ ಅಂತ್ಯಸಂಸ್ಕಾರ ಮಾಡಿರುತ್ತಾರೆ ಆದಕಾರಣ ಇದಕ್ಕೆ ಸಂಬಂಧಪಟ್ಟ ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿ ಯಾಗಾಪುರ ಗ್ರಾಮಸ್ಥರಿಗೆ ಪ್ರತ್ಯೇಕ ಸ್ಮಶಾನ ಭೂಮಿ ಮಂಜೂರು ಮಾಡಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಕಟ್ಟಡ ಕಾರ್ಮಿಕ ಘಟಕದ ಅಧ್ಯಕ್ಷರಾದ ಚಂದ್ರಕಾಂತ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ ಹಾಗೂ ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಉಗ್ರವಾದ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದ್ದಾರೆ.
