ಕಲಬುರಗಿ:ತಾಜಸುಲ್ತಾನಪೂರ ಗ್ರಾಮದಲ್ಲಿ 15ನೇ ಹಣಕಾಸು ಯೋಜನೆ ಹಾಗೂ ಗ್ರಾಮ ಪಂಚಾಯತ ನಿಧಿಯಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಕೂಸಿನ ಮನೆಯ ಉದ್ಘಾಟನೆ ನೆರವೇರಿತು. ಉದ್ಘಾಟನೆಯನ್ನು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ನೇರವೇರಿಸಿ ನಂತರ ಉದ್ಘಾಟನಾ ಭಾಷಣ ಮಾಡಿದರು.ಈ ಸಂದರ್ಭದಲ್ಲಿ ಲಿಂಗರಾಜ ಕಣ್ಣಿ,ಲಿಂಗರಾಜ ತಾರಪೈಲ್,ಗ್ರಾಮ ಪಂಚಾಯತ ಅಧ್ಯಕ್ಷ ಶ್ರೀಮತಿ ಸಾಜೀದಾ ಬೇಗಂ ಮೌಲಾಸಾಬ,ಉಪಾಧ್ಯಕ್ಷರಾದ ಸಂಜೀವಕುಮಾರ ಟಿ ಜವರಕರ್,ಕಾರ್ಯನಿರ್ವಾಹಕ ಅಧಿಕಾರಿ ಸೈಯದ ಪಟೇಲ,ತಾಲೂಕು ಪಂಚಾಯತ ಸಹಾಯಕ ನಿರ್ದೇಶಕ ರೇವಣಸಿದ್ದಪ್ಪ,ಪಂಚಾಯತ ಅಭಿವೃದ್ದಿ ಅಧಿಕಾರಿ ಶ್ರೀಮತಿ ಅನುಪಮ ಎಮ್,ಗ್ರಾಮದ ಮುಖಂಡರಾದ ಚಂದ್ರಶೇಖರ ಪಾಟೀಲ ಹಾಗೂ ಗ್ರಾಮ ಪಂಚಾಯತ ಸರ್ವ ಸದಸ್ಯರು ಉಪಸ್ಥಿತರಿದ್ದರು ಎಂದು ಗ್ರಾಮ ಪಂಚಾಯತ ಸದಸ್ಯರಾದ ಸುನೀಲಕುಮಾರ ವ್ಹಾಯ.ಮದನಕರ್ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.