ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಹೊನ್ನಾಳಿಯಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಸಭೆ

ಲೋಕಸಭಾ ಚುನಾವಣೆಯ ಮುಂಜಾಗ್ರತಾ ಕ್ರಮವಾಗಿ ಹೊನ್ನಾಳಿ ತಾಲೂಕು ಕಚೇರಿಯ ಸಭಾಭವನದಲ್ಲಿ ಉಪ ವಿಭಾಗಾಧಿಕಾರಿ ಹಾಗೂ
ಚುನಾವಣಾ ಅಧಿಕಾರಿ ಅಭಿಷೇಕ್ ಎ ಅವರ ನೇತ್ರತ್ವದಲ್ಲಿ ಸಭೆ ಜರುಗಿತು.

ಹೊನ್ನಾಳಿ:ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗವು ಆದೇಶ ಹೊರಡಿಸಿದ್ದು ನೀತಿ ಸಂಹಿತೆ ಜಾರಿಯಲ್ಲಿದೆ ಚುನಾವಣೆಗಾಗಿ ನೇಮಕಗೊಂಡ ಅಧಿಕಾರಿಗಳು ಯಾವುದೇ ಲೋಪ ದೋಷಗಳು ಆಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಚುನಾವಣಾ ಅಧಿಕಾರಿಗಳು,ಉಪ ವಿಭಾಗಾಧಿಕಾರಿ ಅಭಿಷೇಕ್ ಎ.ಸೂಚನೆ ನೀಡಿದರು.

ತಾಲೂಕು ಕಚೇರಿಯ ಸಭಾಂಗಣದಲ್ಲಿನ ಆವರಣದಲ್ಲಿ ನಡೆದ ಅಧಿಕಾರಿಗಳ ಮತ್ತು ಪತ್ರಕರ್ತರ ಸಭೆಯನ್ನು ನಡೆಸಿ ಮಾತನಾಡಿದರು ನಾನು ಹೊನ್ನಾಳಿಗೆ ಬಂದು ಒಂದು ತಿಂಗಳಾಯಿತು ಎಲ್ಲಾ ಪತ್ರಕರ್ತರ ಪರಿಚಯ ಮಾಡಿಕೊಂಡು ಲೋಕಸಭೆ ಚುನಾವಣೆಯ ವಿಷಯವಾಗಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ನಿಮ್ಮನ್ನು ಕರೆಯಲಾಯಿತು ಎಂದರು ಚುನಾವಣೆಗಳು ಪಾರದರ್ಶಕವಾಗಿ ನಡೆಯಲು ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಹಕಾರ ಮುಖ್ಯವಾಗಿರುತ್ತದೆ ಈಗಾಗಲೇ ತಾಲೂಕಿನ ಗಡಿ ಭಾಗಗಳಲ್ಲಿ ಆರು ಚೆಕ್ ಪೋಸ್ಟಳನ್ನು ನಿರ್ಮಿಸಲಾಗಿದ್ದು ಅವುಗಳು ಅಂದರೆ,110 ಹೊನ್ನಾಳಿ ವಿಧಾನಸಭಾ ಕ್ಷೇತ್ರ ನ್ಯಾಮತಿ ಪೊಲೀಸ್ ಠಾಣೆಯ ಟಿ,ಜಿ,ಹಳ್ಳಿ ಕ್ರಾಸ್,ಸವಳಂಗ, ಹೊಳೆ ಹರಳಹಳ್ಳಿ ಕ್ರಾಸ್ ಹೊನ್ನಾಳಿ ಪೊಲೀಸ್ ಗೊಲ್ಲರಹಳ್ಳಿ ಕ್ರಾಸ್ ಕುಳಗಟ್ಟೆ ಕ್ರಾಸ್ ಜೀನಹಳ್ಳಿ, ಕ್ರಾಸ್ ಬಳಿ ಚೆಕ್ಪೋಸ್ಟ್ ನಿರ್ಮಾಣ ಮಾಡಿ ವಾಹನ ತಪಾಸಣೆಯನ್ನು ನಡೆಸಲಾಗುತ್ತಿದೆ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ವಾಹನಗಳನ್ನು ತಪಾಸಣೆ ನಡೆಸುವಾಗ ವಾಹನ ಚಾಲಕರೊಂದಿಗೆ ಸೌಜನ್ಯತೆಯಿಂದ ನಡೆದುಕೊಳ್ಳುವುದು ಅತ್ಯವಶ್ಯಕ ಕೆಲವು ಸಂದರ್ಭಗಳಲ್ಲಿ ಕುಟುಂಬ ಸದಸ್ಯರು ವಾಹನಗಳಲ್ಲಿ ಇದ್ದಾಗ ಮನವರಿಕೆ ಮಾಡಿಕೊಟ್ಟು ವಾಹನಗಳನ್ನು ತಪಾಸಣೆ ಮಾಡಬೇಕು ಯಾವುದೇ ಅನುಮಾನ ಬಂದಲ್ಲಿ ತಕ್ಷಣವೇ ಪೊಲೀಸ್ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಸಲಹೆ ನೀಡಿದರು.
ಚುನಾವಣೆ ಕೆಲಸಕ್ಕೆ ನಿಯೋಜಿಸಿರುವ ಅಧಿಕಾರಿಗಳು ಲೋಪದೋಷ ಎಸಗಿದ್ದಲ್ಲಿ ಅಂತಹವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವ ಅಧಿಕಾರವಿದೆ ಆದ್ದರಿಂದ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕಾಗಿರುವುದು ಪ್ರತಿಯೊಬ್ಬ ಅಧಿಕಾರಿಯ ಜವಾಬ್ದಾರಿಯಾಗಿದೆ ಸಿಸಿಟಿವಿ ಕಣ್ಗಾವಲಿನಲ್ಲಿ ಎಲ್ಲಾ ಅಧಿಕಾರಿಗಳು ಒಳಪಟ್ಟಿರುವುದರಿಂದ ಜಿಲ್ಲಾಧಿಕಾರಿ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ನಿಮ್ಮ ಮೇಲೆ ನಿಗಾ ಇಟ್ಟಿರುತ್ತಾರೆ ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಗೇಟ್ ಬಳಿ ಅಕ್ರಮಗಳು ನಡೆಯುತ್ತಿವೆ ಎಂದು ಪೊಲೀಸರ ವಿರುದ್ಧ ಆರೋಪಗಳು ಕೇಳಿಬಂದಿದ್ದವು.ಇದನ್ನು ಕಟ್ಟನಿಟ್ಟಾಗಿ ಈ ಬಾರಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ಪೊಲೀಸರಿಗೆ ಸೂಚಿಸಬೇಕು ಎಂದು ಚುನಾವಣಾ ಅಧಿಕಾರಿ ಅಭಿಷೇಕ್ ಅವರು ಸೂಚನೆ ನೀಡಿದರು.ಚುನಾವಣಾ ಸಿಬ್ಬಂದಿಗಳು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕು ಚೆಕ್ ಪೋಸ್ಟ್ ಗಳಲ್ಲಿ ನೀರು ಹಾಗೂ ನೆರಳಿನ ವ್ಯವಸ್ಥೆ ವಾಹನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ತಮ್ಮ ಕರ್ತವ್ಯ ವೇಳೆ ಮುಗಿದ ನಂತರ ಆ ಜಾಗಕ್ಕೆ ಮತ್ತೊಬ್ಬ ಅಧಿಕಾರಿ ಬರುವವರೆಗೂ ಸ್ಥಳ ಬದಲಾವಣೆ ಮಾಡುವಂತಿಲ್ಲ ಪೊಲೀಸ್ ಸಿಬ್ಬಂದಿಗಿ ಎಂಟು ಗಂಟೆಯ ಕೆಲಸವನ್ನು ನಿಯೋಜಿಸಲು ಪೊಲೀಸ್ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಹಲವು ಬಾರಿ ಹೆಚ್ಚಿನ ಕಾರ್ಯ ಒತ್ತಡದಿಂದ ಪೊಲೀಸ್ ಸಿಬ್ಬಂದಿ ಚೆಕ್ ಪೋಸ್ಟ್ ಗಳಲ್ಲಿ ಕರ್ತವ್ಯ ನಿರ್ವಹಿಸುವಲ್ಲಿ ವಿಫಲವಾಗುತ್ತಿದ್ದಾರೆ ಎಂದು ದೂರುಗಳು ಇಂದಿನ ಚುನಾವಣೆಯಲ್ಲಿ ದೂರುಗಳು ಬಂದಿವೆ.ಈಗಾಗಲೇ ಈ ಬಗ್ಗೆ ಪೊಲೀಸ್ ಅಧೀಕ್ಷಕರಿಗೆ ತಿಳಿಸಿದ್ದು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಸಹಕಾರದಿಂದ ಮಾತ್ರ ಅಕ್ರಮಗಳನ್ನು ತಡೆಗಟ್ಟಲು ಸಾಧ್ಯ ಒಬ್ಬರ ಮೇಲೆ ಒಬ್ಬರು ದೂಷಿಸಿಕೊಳ್ಳಬಾರದು ಇದೇ ವೇಳೆ ಎಚ್ಚರಿಕೆ ನೀಡಿದರು

ಅಬಕಾರಿ ಇಲಾಖೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಹೆಚ್ಚು ಪ್ರಕರಣಗಳನ್ನು ದಾಖಲಿಸಿ ಅಬಕಾರಿ ಇಲಾಖೆ ಸಿಬ್ಬಂದಿ ಉತ್ತಮ ಕಾರ್ಯ ನಿರ್ವಹಿಸಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಸಹ ಅಬಕಾರಿ ಇಲಾಖೆಯಿಂದ ಉತ್ತಮ ಸ್ಪಂದನೆ ವ್ಯಕ್ತವಾಗುವ ಭರವಸೆಯಿದ್ದು ಅಧಿಕಾರಿಗಳು ಅಕ್ರಮ ಮಧ್ಯ ಮಾರಾಟ ಹಾಗೂ ಸಾಗಾಟದ ಬಗ್ಗೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ ಲೋಕಸಭಾ ಚುನಾವಣೆಯನ್ನು ತಾಲೂಕಿನಲ್ಲಿ ಯಶಸ್ವಿಗೊಳಿಸಲು ಕಾರ್ಯ ಪ್ರವೃತ್ತರಾಗೋಣ ಎಂದು ತಿಳಿಸಿದರು.ಲೋಕಸಭಾ ಚುನಾವಣೆಗಾಗಿ ಪೊಲೀಸ್ ಸಿಬ್ಬಂದಿಯನ್ನು ಈಗಾಗಲೇ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು ಚೆಕ್ ಪೋಸ್ಟ್ ಗಳಲ್ಲಿ ಹದ್ದಿನ ಕಣ್ಣಿಡಲು ತಿಳಿಸಿದ್ದು ಎಲ್ಲಾ ಸಹಕಾರವನ್ನು ನೀಡಲಾಗುವುದು ಆಗಿಂದಾಗ್ಗೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು ಯಾವುದೇ ಅನುಮಾನ ಬಂದಲ್ಲಿ ಅಥವಾ ಪ್ರಕರಣಗಳನ್ನು ದಾಖಲಿಸುವ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳು ಪೊಲೀಸ್ ಇಲಾಖೆಯನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಉಪ ವಿಭಾಗ ಅಧಿಕಾರಿ ಮತ್ತು ಚುನಾವಣಾ ಅಧಿಕಾರಿ ಅಭಿಷೇಕ್ ಎ ಸುಮಾ ಹೆಚ್ ಇ,ಓ ರಾಘವೇಂದ್ರ,ರವಿಕುಮಾರ್ ಆರ್ ಐ, ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ-ಪ್ರಭಾಕರ ಡಿ ಎಂ ಹೊನ್ನಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ