ಮಾಜಿ ಪ್ರಧಾನ ಮಂತ್ರಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಜೆಡಿಎಸ್ ವರಿಷ್ಠರು ಈಗಾಗಲೇ ಎನ್‌ಡಿಎ ಮೈತ್ರಿಕೂಟದ ಬಗ್ಗೆ ತೀರ್ಮಾನ ಮಾಡಲಾಗಿದ್ದು ಇದಕ್ಕೆ ಬದ್ಧನಾಗಿರುತ್ತೇನೆ ಎಂದು ಶಾಸಕರಾದ ಎಂ.ಆರ್ ಮಂಜುನಾಥ್ ತಿಳಿಸಿದರು.
ಹನೂರು ಪಟ್ಟಣದ ಆರ್.ಎಸ್ ದೊಡ್ಡಿ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದ್ದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡುತ್ತಾ ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಇತ್ತು ಅದೇ ಪರಿಸ್ಥಿತಿ ಇದೀಗ ನಿರ್ಮಾಣವಾಗಿದ್ದು ಸಂದಿಗ್ನ ಪರಿಸ್ಥಿತಿ ಎದುರಾಗಿದೆ ರಾಜ್ಯಮಟ್ಟದಲ್ಲಿ ದೊಡ್ಡವರು ಈಗಾಗಲೇ ಮೈತ್ರಿ ಬಗ್ಗೆ ತೀರ್ಮಾನ ಮಾಡಿದ್ದಾರೆ ಹೀಗಾಗಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ರವಾನಿಸಬೇಕಾಗಿದೆ ಹೀಗಾಗಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರೇ ನಮಗೆ ಶ್ರೀರಕ್ಷೆಯಾಗಿದ್ದು,ನಿಮ್ಮಗಳ ತೀರ್ಮಾನವೇ ನನ್ನ ತೀರ್ಮಾನ ಎಂದರಲ್ಲದೆ ಹೈಕಮಾಂಡ್ ಮೈತ್ರಿ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದರು.
ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳಿಂದ ಜೆಡಿಎಸ್ ಗೆ ಕೈಜೋಡಿಸಿ ನನ್ನನ್ನು ಶಾಸಕರಾಗಿ ಆಯ್ಕೆ ಮಾಡಿದ್ದೀರಾ ಹೀಗಾಗಿ ನಿಮ್ಮಗಳ ಋಣ ತೀರಿಸಲು ನಾನು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಮುಂಬರುವ ಸ್ಥಳೀಯ ಚುನಾವಣೆ ಬಗ್ಗೆ ಯೋಚಿಸಬೇಕಾಗಿದ್ದು ಗ್ರಾಮ ಪಂಚಾಯಿತಿ ಮಟ್ಟದ ಚುನಾವಣೆಯಲ್ಲಿ ಒಮ್ಮತವಾಗಿ ತೀರ್ಮಾನ ತೆಗೆದುಕೊಂಡು ಒಟ್ಟಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸೋಣ ಎಂದರಲ್ಲದೆ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಜೆಡಿಎಸ್ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಇದೇ ವೇಳೆ ಕರೆ ನೀಡಿದರು.
ಹನೂರು ವಿಧಾನಸಭಾ ಕ್ಷೇತ್ರ ಭೌಗೋಳಿಕವಾಗಿ ವಿಸ್ತರಣಾ ಹೊಂದಿದ್ದು ಅವರು ಅಭಿವೃದ್ಧಿ ಕೆಲಸಗಳು ಆಗಬೇಕಾಗಿದೆರೈತರಿಗೆ ನೀರಾವರಿ ಕಲ್ಪಿಸಲು ಈಗಾಗಲೇ ಮಾಸ್ಟರ್ ಪ್ಲಾನ್ ಬಗ್ಗೆ ಚರ್ಚೆ ನಡೆಸಲಾಗಿದೆ.
ಸರ್ಕಾರದ ಗ್ಯಾರಂಟಿಗಳಿಂದ ಸಮರ್ಪಕವಾಗಿ ಅನುದಾನ ಸಿಕ್ಕಿಲ್ಲ ಹೀಗಾಗಿ ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಅನುದಾನ ತಂದು ಶ್ರಮಿಸಲಾಗುವುದು ಇದೆ ವೇಳೆ ಭರವಸೆ ನೀಡಿದರು
ಈ ಸಂದರ್ಭದಲ್ಲಿ ಜಿಲ್ಲಾ ಜೆಡಿಎಸ್ ವಕ್ತಾರರಾದ ಸೈಯದ್ ಅಕ್ರಮ್,ಮುಳ್ಳೂರು ಶಿವಮಲ್ಲು,ಶಾಗ್ಯ ನಾಗೇಂದ್ರ ಬಾಬು,ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶಿವಮೂರ್ತಿ,ಜೆಸಿಂ ಪಾಷಾ,ಮಂಜೇಶ್ ಗೌಡ,ತಂಗವೇಳು, ವಿಜಯಕುಮಾರ್,ಚಾಮುಲ್ ನಿರ್ದೇಶಕ ಮಹದೇವ್ ಪ್ರಸಾದ್,ಪುಟ್ಟಮಾದ,ಮಣಿ ಚಿನ್ನಸ್ವಾಮಿ, ಗೋವಿಂದ್,ಮಾದೇಶ್,ರಾಜಪ್ಪ,ಬಾಲಣ್ಣ, ಸಿದ್ದರಾಜ್,ಎಸ್.ಆರ್ ಮಹಾದೇವ್ ಸೇರಿದಂತೆ ಮತ್ತಿತರರು ಇದ್ದರು.
ವರದಿ:ಉಸ್ಮಾನ್ ಖಾನ್