ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಮಂಡ್ಯ ಸಂಸದೆ ಸುಮಲತಾ ಅವರು ಏಪ್ರಿಲ್ 3 ರಂದು ಬೆಂಬಲಿಗರ ಸಭೆ ನಡೆಸಿ ಮುಂದಿನ ತೀರ್ಮಾನ ತಿಳಿಸುವುದಾಗಿ ಹೇಳಿದ್ದಾರೆ ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಅವರು ಮಂಡ್ಯದ ಜನರ ಒಳಿತಿಗಾಗಿ ಒಳ್ಳೆಯ ನಿರ್ಧಾರ ಕೈಗೊಳ್ಳುತ್ತೇನೆ ನನಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಿಂದಲೂ ಪಕ್ಷ ಸೇರುವಂತೆ ಆಹ್ವಾನ ಬಂದಿದೆ ವಿಜಯೇಂದ್ರ ಅವರು ಭೇಟಿ ಮಾಡಿ ಹೈಕಮಾಂಡ್ ನಿಂದ ಸೂಕ್ತ ಸ್ಥಾನಮಾನ ನೀಡುವ ಭರವಸೆ ಇದೆ ಎಂದು ಹೇಳಿದ್ದಾರೆ ಹೀಗಾಗಿ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಅಭಿಮಾನಿಗಳ ಸಮ್ಮುಖದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಅವರು ಸ್ಪಷ್ಟನೆ ನೀಡಿದ್ದಾರೆ.
ವರದಿಗಾರರು ಕೊಟ್ಟ ಕರಿಯಣ್ಣ