ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ಹಿಂದಿನಿಂದಲೂ ನಗರದಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಎಲ್ಲಾ ಹಬ್ಬಗಳನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ನಡೆಸಿಕೊಂಡು ಬರುತ್ತಿದ್ದೇವೆ ಅದೇ ರೀತಿ ರಂಜಾನ್ ಹಾಗೂ ಶ್ರೀ ರೇಣುಕಾ ಎಲ್ಲಮ್ಮ ದೇವಿ ಕರಗ ಮಹೋತ್ಸವವನ್ನು ನಡೆಸಿಕೊಂಡು ಹೋಗಬೇಕು ಎಂದು ಆರಕ್ಷಕ ವೃತ್ತ ನಿರೀಕ್ಷಕ ಎಂ ಶ್ರೀನಿವಾಸ್ ಹೇಳಿದರು.ನಗರದ ಜನಸ್ನೇಹಿ ಪೊಲೀಸ್ ಠಾಣೆಯಲ್ಲಿ ರಂಜಾನ್ ಹಾಗೂ ಶ್ರೀ ರೇಣುಕಾ ಎಲ್ಲಮ್ಮ ದೇವಿಯ ಕರಗದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆ ತಮಗೆ ಬೇಕಾಗಿರುವ ಸವಲತ್ತುಗಳನ್ನು ನೀಡಲು 24 ಗಂಟೆ ಕೆಲಸ ಮಾಡಲು ಸಿದ್ದರಿದ್ದೇವೆ ಎಲ್ಲವನ್ನು ಅಚ್ಚುಕಟ್ಟಾಗಿ ವ್ಯವಸ್ಥಿತವಾಗಿ ಮಾಡೋಣ ಈ ಬಾರಿ ರಂಜಾನ್ ಹಾಗೂ ಶ್ರೀ ರೇಣುಕಾ ಎಲ್ಲಮ್ಮ ದೇವಿಯ ಕರಗ ಒಂದೇ ಸಾರಿ ಬಂದಿರುವುದರಿಂದ ಎಲ್ಲಾ ನಾಗರೀಕರು ಸ್ನೇಹ ಸೌಹಾರ್ದತೆಯಿಂದ ಹಬ್ಬಗಳನ್ನು ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿ ತುಂಬಾ ಸಂತೋಷವಾಗಿ ಆಚರಿಸಿ ಎಂದರು.ಈ ಸಂದರ್ಭದಲ್ಲಿ ನಗರ ಸಭೆ ಸದ್ಯಸ ರಾಘವೇಂದ್ರ ಮುಖಂಡರಾದ ನಂದ್ ಕಿಶನ್ ಸಾದಿಕ್ ಸಲಾಂ ಮುಂತಾದವರು ಹಾಜರಿದ್ದರು.
ವರದಿ ಗಗನ್ ಸಾಮ್ರಾಟ್,ಶಿಡ್ಲಘಟ್ಟ