ದಾವಣಗೆರೆ ಲೋಕಸಭಾ ಟಿಕೆಟ್ ಕೈತಪ್ಪಿದ ಬಿ ಜಿ ವಿನಯ್ ಕುಮಾರ್ ನಿನ್ನೆ ತಮ್ಮ ಬೆಂಬಲಿಗರೊಂದಿಗೆ ತಮ್ಮ ನಿವಾಸದಲ್ಲಿ ಲೋಕ ಸಮರದ ಬಗ್ಗೆ ಚರ್ಚೆ ನಡೆಸಿ ಅಪಾರ ಬೆಂಬಲಿಗರು ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಸಲುವಾಗಿ ತುಂಬಾ ಬೇಸರ ವ್ಯಕ್ತಪಡಿಸಿದರು.
ನಂತರ ನಿಮಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡದಿದ್ದರೂ ಪರವಾಗಿಲ್ಲ ನಾವು ನಿಮ್ಮೊಂದಿಗೆ ಇದ್ದೇವೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುವ ಬಗ್ಗೆ ಗಮನ ಹರಿಸಿ ಚುನಾವಣೆಗೆ ಸ್ಪರ್ಧಿಸುವ ಮನಸು ಮಾಡಿ ಎಂದು ಬೆಂಬಲಿಗರು ಒತ್ತಾಯ ಮಾಡಿದರು.
ಇದರಿಂದ ವಿನಯ್ ಕುಮಾರ್ ಅವರು ದಾವಣಗೆರೆ ಜಿಲ್ಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಲು ತಯಾರಿ ನಡೆಸುತ್ತಿರುವುದು ಎದ್ದು ಕಾಣುತ್ತದೆ
ಇದರಿಂದಾಗಿ ದಾವಣಗೆರೆ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾವು ರಂಗೇರುತ್ತಿದೆ ವಿಜಯಲಕ್ಷ್ಮಿ ಹೂಮಾಲೆ ಯಾರಿಗೆ ಮತ್ತು ಮತದಾರರ ಪ್ರಭು ಯಾರ ಪರವಾಗಿ ಇದ್ದಾನೋ ಕಾದು ನೋಡಬೇಕಿದೆ.
ವರದಿ-ಪ್ರಭಾಕರ್ ಡಿ.ಎಂ