ಚಿಕ್ಕಬಳ್ಳಾಪುರ:ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಒಟ್ಟು 16 ಅಭ್ಯರ್ಥಿಗಳಿಂದ ಒಟ್ಟು 17 ನಾಮಪತ್ರಗಳನ್ನ ಚುನಾವಣಾಧಿಕಾರಿ ಪಿ.ಎನ್ ರವೀಂದ್ರ ಅವರಿಗೆ ಜಿಲ್ಲಾಡಳಿತ ಭವನದ ಜಿಲ್ಲಾ ಚುನಾವಣಾಧಿಕಾರಿ ಕಚೇರಿಯಲ್ಲಿ ಸಲ್ಲಿಸಿದರು.
ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಡಾ.ಕೆ.ಸುಧಾಕರ್ ಸಹ ಎರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.ಪಕ್ಷೇತರ ಅಭ್ಯರ್ಥಿಗಳಾದ ಹೆಚ್.ಸಿ.ಚಂದ್ರಶೇಖರ್,ರಾಮನಾಯ್ಕ ಅವರು ಸಹ ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಇಂಡಿಯನ್ ಲೇಬರ್ ಪಾರ್ಟಿ (ಅಂಬೇಡ್ಕರ್ ಪುಲೆ) ಅಭ್ಯರ್ಥಿಯಾಗಿ ಟಿ.ಆರ್.ನಾರಾಯಣರಾವ್, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಡಿ.ಇ.ಮಾರುತಿ ಪ್ರಸನ್ನ ಕುಮಾರ್,ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ ವತಿಯಿಂದ ನಾರಾಯಣಸ್ವಾಮಿ ಬಿ.ಎಂ.ಅಖಿಲ ಭಾರತ ಹಿಂದೂ ಮಹಾ ಸಭಾ ಪಕ್ಷದಿಂದ ರಾಜಾರೆಡ್ಡಿ,ಇಂಡಿಯನ್ ಮೂವ್ ಮೆಂಟ್ ಪಾರ್ಟಿ ಯಿಂದ ಜಿ.ಎನ್.ಕೋದಂಡರೆಡ್ಡಿ,ಉತ್ತಮ ಪ್ರಜಾಕೀಯ ಪಕ್ಷದಿಂದ ವೆಂಕಟೇಶ ಮೂರ್ತಿ ವಿ ರವರು ನಾಮಪತ್ರ ಸಲ್ಲಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿಗಳಾಗಿ ಸಂದೇಶ್ ಜಿ, ಟಿ.ವೆಂಕಟಶಿವುಡು,ಸಿ.ವಿ ಲೋಕೇಶ್ ಗೌಡ,ನರಸಿಂಹಮೂರ್ತಿ ವಿ.ಎನ್.,ವೆಂಕಟೇಶಪ್ಪ.ಎನ್.,ವಲಸಪಲ್ಲಿ ಉತ್ತಪ್ಪ,ರಾಮಯ್ಯ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಡಾ. ಎನ್ ತಿಪ್ಪೇಸ್ವಾಮಿ ಅವರು ಇದ್ದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 36 ಅಭ್ಯರ್ಥಿಗಳಿಂದ 43 ನಾಮಪತ್ರ ಸಲ್ಲಿಕೆಯಾಗಿದೆ.ಅಭ್ಯರ್ಥಿಗಳ ನಾಮಪತ್ರದೊಂದಿಗೆ ಸಲ್ಲಿಸಿರುವ ಅಫಿಡವಿಟ್ ಪ್ರತಿಯನ್ನು ಭಾರತ ಚುನಾವಣಾ ಆಯೋಗದ ಪೋರ್ಟಲ್ ನಲ್ಲಿ ಆಪ್ ಲೋಡ್ ಮಾಡಲಾಗಿದೆ ಮತ್ತು ಚುನಾವಣಾಧಿಕಾರಿಗಳ ಕಾರ್ಯಾಲಯದ ಸೂಚನ ಫಲಕದಲ್ಲಿ ನಾಮಪತ್ರದ ನಕಲು ಪ್ರತಿ ಮತ್ತು ಅಫಿಡವಿಟ್ ಅನ್ನು ಪ್ರಚುರಪಡಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ-ತುಳಸಿ ನಾಯ್ಕ್