ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಹಸಿವು ಮುಕ್ತ ದೇಶ ನಿರ್ಮಾಣದಲ್ಲಿ ಬಾಬೂಜಿ ಅವರ ಪಾತ್ರ ಅಪಾರ:ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಚಿಕ್ಕಬಳ್ಳಾಪುರ:ದೇಶ ಹಸಿವಿನ ಸಂಕಷ್ಟದಲ್ಲಿದ್ದಾಗ ಹಸಿರು ಕ್ರಾಂತಿಗೆ ನಾಂದಿ ಹಾಡುವ ಮೂಲಕ ದೇಶದಲ್ಲಿ ಆಹಾರ ಧಾನ್ಯಗಳು ಸಮೃದ್ಧವಾಗಿ ಸಿಗುವಂತೆ ಮಾಡಿದವರು ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಹಸಿರುಕ್ರಾಂತಿಯ ಹರಿಕಾರ,ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರ 117 ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ದೀನದಲಿತರು,ರೈತರು,ಕಾರ್ಮಿಕರು,ಶೋಷಿತರ ಬಗ್ಗೆ ಅಪಾರ ಕಳಕಳಿಯನ್ನು ಹೊಂದಿದ್ದ ದೂರದೃಷ್ಟಿಯ ನಾಯಕ ಬಾಬು ಜಗಜೀವನರಾಮ್.ಕೇಂದ್ರದಲ್ಲಿ ಹಲವು ಮಹತ್ವದ ಸಚಿವ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿದ್ದ ಅವರು ದೇಶ ಹಸಿವಿನ ಸಂಕಷ್ಟದಲ್ಲಿದ್ದಾಗ ಹಸಿರು ಕ್ರಾಂತಿಗೆ ನಾಂದಿ ಹಾಡಿದರು.ಇಂದು ದೇಶ ಆಹಾರ ಸಮೃದ್ಧತೆಯಲ್ಲಿ ಸ್ವಾವಲಂಬನೆ ಸಾಧಿಸಿದೆ ಎಂದರೆ ಅದಕ್ಕೆ ಅವರ ಪರಿಶ್ರಮ ಮತ್ತು ದೂರದೃಷ್ಟಿಯೇ ಕಾರಣ.ಅವರ ಚಿಂತನೆಗಳ ಬೆಳಕಿನಲ್ಲಿ ವಿದ್ಯಾರ್ಥಿ ಯುವಜನರು ದೇಶವನ್ನು ಕೊಂಡೊಯ್ಯುವ ಅಗತ್ಯವಿದೆ ಎಂದರು.

ಭಾರತೀಯ ಸಮಾಜದ ಧೃವತಾರೆಗಳಾದ ಡಾ.ಬಾಬು ಜಗಜೀವನರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ರವರು ಶೋಷಿತ ವರ್ಗದ ಏಳಿಗೆ,ಅಭಿವೃದ್ಧಿ,ಸಂಘಟನೆ,ಹೋರಾಟ,ಶಿಕ್ಷಣಕ್ಕಾಗಿ ಶ್ರಮಿಸಿ ಎಲ್ಲರ ಬದುಕಿಗೆ ಬೆಳಕಾಗಿದ್ದಾರೆ.ಅವರ ಜೀವನ ದಾರಿ ಮತ್ತು ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ರೂಡಿಸಿಕೊಂಡು ದೇಶದ ಭವಿಷ್ಯವನ್ನು ಉಜ್ವಲಗೊಳಿಸಲು ಶ್ರಮಿಸಬೇಕು.ನಮ್ಮ ಇಂದಿನ ಮತ್ತು ಮುಂದಿನ ಪೀಳಿಗೆಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಡಾ.ಬಾಬು ಜಗಜೀವನರಾಂ ರವರು ಭಾರತದ ಮಾಜಿ ಉಪಪ್ರಧಾನಿಗಳಾಗಿ ಹಾಗೂ ಕೇಂದ್ರದ ವಿವಿಧ ಇಲಾಖೆಗಳ ಸಚಿವರಾಗಿ ದೇಶವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿ ದೇಶದ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು.
ಉಪನ್ಯಾಸಕ ಮುನಿರಾಜು ಎಂ.ಅರಿಕೆರೆ ರವರು ಮಾತನಾಡಿ ಡಾ.ಬಾಬು ಜಗಜೀವನ್‌ ರಾಮ್ ಅವರು ಬಡತನ ಮತ್ತು ಅಸ್ಪೃಷ್ಯತೆಯ ಮಧ್ಯೆ ಮೂಡಿದ ಪರಿವರ್ತನೆಯ ಹಣತೆಯಾಗಿದ್ದಾರೆ.ಕೆಳ ಸಮುದಾಯದಲ್ಲಿ ಜನಿಸಿ ಜಾತಿ ತಾರತಮ್ಯಕ್ಕೆ ಒಳಗಾಗಿದ್ದರು ಸಹ ತಮ್ಮ ಅಚಲ ಸಾಧನೆಯ ಮೂಲಕ ಭಾರತದ ರಾಜಕೀಯ ಚರಿತ್ರೆಯಲ್ಲಿ 50 ವರ್ಷಗಳ ಕಾಲ ಉತ್ತಮ ಸಂಸದೀಯಪಟುವಾಗಿ ಅಚ್ಚಳಿಯದ ಸಾಧನೆ ಮಾಡಿದ್ದರು ಎಂದರು.

ಕಾರ್ಮಿಕ ಖಾತೆ ಸಚಿವರಾಗಿ ಕಾರ್ಮಿಕರ ಸಂಕಷ್ಟಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ರೂಪಿಸಿ ಅನುಷ್ಟಾನಕ್ಕೆ ತಂದರು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಂಚೆ ಕಚೇರಿಗಳನ್ನು ತೆರೆಯುವ ಜೊತೆಗೆ ಎಸ್.ಸಿ,ಎಸ್.ಟಿ ಸಮುದಾಯದ ಅಭ್ಯರ್ಥಿಗಳ ನೇಮಕಾತಿಗೆ ಒತ್ತು ನೀಡಿದರು.ರೈಲ್ವೆ ಮಜ್ದೂರ್ ಯೂನಿಯನ್ ಸಂಘಟನೆ ಸ್ಥಾಪನೆ ಮಾಡಿ ಮೀಸಲಾತಿ ಅಡಿಯಲ್ಲಿ ಬರುವ ಖಾಲಿ ಹುದ್ದೆಗಳ ನೇಮಕದಲ್ಲಿ ಶೋಷಿತ ಸಮುದಾಯಗಳ ಪರ ಸೇವೆ ಸಲ್ಲಿಸಿದ್ದಾರೆ.ಕೃಷಿ ಸಚಿವರಾಗಿದ್ದ ಅವಧಿಯಲ್ಲಿ ಪಾರಂಪರಿಕ ಕೃಷಿಯ ಜತೆಗೆ ಭೂರಹಿತ ಸಾಗುವಳಿದಾರರಿಗೆ ಭೂಮಿ ಹಂಚಿಕೆ,ಸಹಕಾರಿ ಸೇವೆ ಪ್ರಾರಂಭ,ಉತ್ತಮ ಬೀಜ,ರಸಗೊಬ್ಬರ ವಿತರಣೆ ಯೋಜನೆ ಜಾರಿಗೊಳಿಸಿ ಹಸಿರು ಕ್ರಾಂತಿಗೆ ಕಾರಣ ಕರ್ತರಾಗಿದ್ದಾರೆ ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಹಾಗೂ ಡಾ.ಬಾಬು ಜಗಜೀವನರಾಂ ರವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು.

ಡಾ.ಬಾಬು ಜಗಜೀವನರಾಂ ರವರ 117ನೇ ಜನ್ಮ ದಿನಾಚರಣೆಯ ಜಯಂತಿಯ ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನದ ಜಾಗೃತಿ ಕುರಿತು ಮತದಾರರ ಪ್ರತಿಜ್ಞಾವಿಧಿ ಬೋಧಿಸಲಾಯಿತು ಏಪ್ರಿಲ್ 26 ರಂದು ತಪ್ಪದೇ ಎಲ್ಲರೂ ಮತದಾನ ಮಾಡಲು ಮನವಿ ಮಾಡಲಾಯಿತು.ಕಾರ್ಯಕ್ರಮದ ಆರಂಭದಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್,ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ತೇಜಾನಂದ ರೆಡ್ಡಿ,ತಹಸೀಲ್ದಾರ್ ಅನಿಲ್,ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿ ಸಂದೀಪ್ ಕುಮಾರ್,ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶೇಷಾದ್ರಿ,ವಿವಿಧ ಸಮುದಾಯಗಳ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ-ತುಳಸಿ ನಾಯ್ಕ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ