ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಭೀಮಾ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 133 ನೇ ಜಯಂತಿ ನಿಮಿತ್ಯ ಇಂದು ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ಗಡ್ಡಿ ಲಿಂಗ ಪೂಜಾರಿ ಹಾಗೂ ಶಾಲೆಯ ಮುಖ್ಯೋಪಾಧ್ಯಯರಾದ ಶ್ರೀ ಪೀರಹಮ್ಮದ್ ಬಡಿಗೇರ್ ಇವರು ಫೋಟೋ ಪೂಜೆಯನ್ನು ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆಯನ್ನು ಮಾಡಿ ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಶಾಲಾ ಸಹ ಶಿಕ್ಷಕರಾದ ಶ್ರೀ ಬಿ.ಕೆ.ಭಜಂತ್ರಿ ಹಾಗೂ ಅತಿಥಿ ಶಿಕ್ಷಕರಾದ ಶ್ರೀ ಸಂಜೀವ್ ಪಾಲವೆ,ಶ್ರೀಮತಿ ಮಹಾದೇವಿ ದಿಂಡೂರ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.
ವರದಿ=ಮನೋಜ್ ನಿಂಬಾಳ್



















