ಸೊರಬ:ಅಭಿವೃದ್ಧಿಯೇ ಧ್ಯೇಯ ಮಂತ್ರ ಎಂದು ನಂಬಿರುವ ಅಭಿವೃದ್ಧಿಯ ಹರಿಕಾರರಾದ ಬಿ.ವೈ. ರಾಘವೇಂದ್ರ ಅವರನ್ನು ಬೆಂಬಲಿಸಿ ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದು ಜೆಡಿಎಸ್ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಸಂತೋಷ್ ಕುಮಾರ್ ಎಂ.ಎಸ್ ಹೇಳಿದರು.
ಪಟ್ಟಣದಲ್ಲಿ ಜೆಡಿಎಸ್ ಮುಖಂಡರ ಸಭೆಯನ್ನು ಮಾತನಾಡಿದ ಅವರು ಜೆಡಿಎಸ್ ವರಿಷ್ಟ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ದೇಶದ ಅಭಿವೃದ್ಧಿ ಹಾಗೂ ಭದ್ರತೆಯ ಹಿತದೃಷ್ಠಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ.ಅದರಂತೆ ಜೆಡಿಎಸ್ ಹಿಂದುಳಿದ ವರ್ಗಗಳ ಘಟಕದ ಪದಾಧಿಕಾರಿಗಳು ತಾಲೂಕಿನ ಹಳ್ಳಿ ಹಳ್ಳಿಗೆ ಭೇಟಿ ನೀಡಿ ಎಲ್ಲಾ ಹಿಂದುಳಿದ ವರ್ಗಗಳ ಜನತೆಯನ್ನು ಭೇಟಿ ಮಾಡಿ ಪ್ರಚಾರ ನಡೆಸಿ ಹೆಚ್ಚಿನ ಬಹುಮತದಿಂದ ಎನ್‌ಡಿಎ ಅಭ್ಯರ್ಥಿ ಬಿ.ವೈ ರಾಘವೇಂದ್ರ ಗೆಲುವಿಗೆ ಶ್ರಮಿಸಲಾಗುವುದು ಎಂದರು.
ಜಿಲ್ಲೆಯಲ್ಲಿ 8 ಲಕ್ಷಕ್ಕೂ ಅಧಿಕ ಹಿಂದುಳಿದ ಮತದಾರರಿದ್ದು,ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕೈಗೊಂಡ ಉತ್ತಮ ಆಡಳಿತವನ್ನು ಜನತೆ ಮರೆತಿಲ್ಲ.ದೇಶದಲ್ಲೇ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಳಕೆ ಮಾಡಿರುವ ಬಿ.ವೈ.ರಾಘವೇಂದ್ರ ಅವರು ಕ್ಷೇತ್ರದ ಸರ್ವ ಜನಾಂಗದ ಅಭಿವೃದ್ಧಿಯ ಹರಿಕಾರರಾಗಿದ್ದಾರೆ. ಇವರನ್ನು ಮತ್ತೊಮ್ಮೆ ಗೆಲ್ಲಿಸಿ ಸಂಸದರನ್ನಾಗಿ ಮಾಡಿ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಮತದಾರರು ಮುಂದಾಗಬೇಕು ಎಂದು ಮನವಿ ಮಾಡಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಗಣಪತಿ ಟಿ.ಜಿ ಕೊಪ್ಪ ಮಾತನಾಡಿ,ದೇಶದ ಉಳಿವಿಗಾಗಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮತ್ತೊಮ್ಮೆ ಕೇಂದ್ರದಲ್ಲಿ ಆಡಳಿತ ನಡೆಸಲು ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರ ಜೊತೆಗೂಡಿ ಮೈತ್ರಿಕೂಟದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಲಾಗುವುದು ಎಂದರು.
ಜಿಲ್ಲಾ ಒಬಿಸಿ ಅಧ್ಯಕ್ಷ ಸುರೇಶ್ ಮಾತನಾಡಿ, ಬಿ.ವೈ.ರಾಘವೇಂದ್ರ ಈ ಬಾರಿ ಗೆದ್ದರೆ ಕೇಂದ್ರದಲ್ಲಿ ಸಚಿವರಾಗುವ ಸಾಧ್ಯತೆ ಇದ್ದು,ಅವರನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಿದೆ ಎಂದರು.
ಜಿಲ್ಲಾ ಒಬಿಸಿ ಅಧ್ಯಕ್ಷ ಸುರೇಶ್,ಉಸ್ತುವಾರಿ ಅಣ್ಣಪ್ಪ ಹೆಚ್.ಕೆ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಎಂ.ಸ0ಗಯ್ಯ,ಟೌನ್ ಅಧ್ಯಕ್ಷ ಶ್ರೀಧರ್ ಶೇಟ್, ಮುಖಂಡರಾದ ಸಿ.ಪಿ ತುಳಜಪ್ಪ,ದಿಗಂಬರ ಮತ್ತಿತರರು ಇದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.