ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಇಂದಿರಾ ನಗರದಲ್ಲಿರುವ ನಾಮಫಲಕಕ್ಕೆ ಹೂವಿನ ಮಾಲಾರ್ಪಣೆ ಹಾಕುವುದರ ಮುಖಾಂತರ ಭಾರತ ವಿಶ್ವರತ್ನ ಭೂಮಿ ತೂಕದ ಒಡೆಯ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಸರಳವಾಗಿ ಆಚರಣೆ ಮಾಡಲಾಯಿತು.ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಸoವಿಧಾನ ರಚಿಸದಿದ್ದಿರೆ ನಾವು ಸ್ವತಂತ್ರವಾಗಿ ಓಡಾಡಲು ಆಗುತ್ತಿರಲಿಲ್ಲ ಒಳ್ಳೆ ಬಟ್ಟೆ ತೊಡಲು ಆಗುತ್ತಿರಲಿಲ್ಲ ಮತದಾನ ಮಾಡುವ ಹಕ್ಕನ್ನು ಕೊಟ್ಟಿದ್ದಾರೆ ಎಲ್ಲರಿಗೂ ಸಮಾನತೆಯ ಶಿಕ್ಷಣವನ್ನು ಕೊಟ್ಟಿದ್ದಾರೆ ಅಂಬೇಡ್ಕರ್ ಅವರ ಆದರ್ಶಗಳನ್ನು ಪಾಲಿಸಿಕೊಂಡು ಎಲ್ಲರೂ ಹೋಗಬೇಕು ಅದೇ ರೀತಿಯಾಗಿ ಮತ್ತು ಭಾರತೀಯರ ಬದುಕಿಗೆ ಸೂರ್ಯನ ಬೆಳಕಾಗಿ ಬಂದರು ಮತ್ತು ಸಂವಿಧಾನ ರಚನಾ ಸಭೆಯ ಕೊನೆಯ ಸಭೆ ನಡೆದದ್ದು 1949ರ ನವಂಬರ್ 26 ರಂದು ಅಂದು ಹಾಜರಿದ್ದ 285 ಸದಸ್ಯರು ಕರಡಿಗೆ ಸಹಿ ಹಾಕಿ ಸಂವಿಧಾನವನ್ನು ಅಖೈರುಗೊಳಿಸಿದರೆ,284 ಸದಸ್ಯರು ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಅವರ ಪಾತ್ರವನ್ನು ಮುಕ್ತಕಂಠದಿಂದ ಹಾಡಿ ಹೊಗಳಿದ್ದರು.
ಸಂವಿಧಾನ ರಚನಾ ಸಭೆಯ ಕರಡು ಸಮಿತಿಯ ಸದಸ್ಯರಾಗಿದ್ದ ಟಿ.ಟಿ. ಕೃಷ್ಣಮಾಚಾರಿಯವರಂತೂ ಅಂಬೇಡ್ಕರ್ ಅವರಿಲ್ಲದಿದ್ದರೆ ಸಂವಿಧಾನ ರಚನೆ ಎಷ್ಟು ಕಷ್ಟವಾಗುತ್ತಿತ್ತೆಂಬುದನ್ನು ಮನದುಂಬಿ ವಿವರಿಸಿದ್ದಾರೆ.
ಅವರ ಪ್ರಕಾರ ಕರಡು ಸಮಿತಿಯ ಸದಸ್ಯರಾಗಿದ್ದ ಏಳು ಜನ ಸದಸ್ಯರಲ್ಲಿ ಒಬ್ಬರು ಮರಣಹೊಂದಿದರು. ಇಬ್ಬರು ದೆಹಲಿಯಿಂದ ದೂರ ಉಳಿದಿದ್ದು ಯಾವ ಸಭೆಗೂ ಬರಲಿಲ್ಲ ಒಬ್ಬರು ಅಮೆರಿಕ ಸೇರಿಕೊಂಡರು. ಮತ್ತೊಬ್ಬರಿಗೆ ಅನಾರೋಗ್ಯ ಹಾಗೂ ತಾನು ಸಂಪೂರ್ಣವಾಗಿ ಸರ್ಕಾರದ ಆಡಳಿತಾತ್ಮಕ ಕೆಲಸಗಳಲ್ಲಿ ತೊಡಗಿಕೊಂಡದ್ದರಿಂದ ಸಂವಿಧಾನವನ್ನು ರಚಿಸುವ ಸಂಪೂರ್ಣ ಹೊಣೆ ಅಂಬೇಡ್ಕರ್ ಅವರ ಮೇಲೆ ಬಿತ್ತು ಹಾಗೂ ಅಂಬೇಡ್ಕರ್ ಅವರ ತಮ್ಮ ತೀವ್ರ ಅನಾರೋಗ್ಯದ ನಡುವೆಯೂ ದಿನಕ್ಕೆ 18 ಗಂಟೆಗಳಷ್ಟು ಕೆಲಸ ಮಾಡಿ ಕರಡು ರಚನೆ ಸಾಧ್ಯಗೊಳಿಸಿದ ವಾಸ್ತವವನ್ನು ಇಡೀ ದೇಶಕ್ಕೆ ತಿಳಿಸಿಕೊಟ್ಟರು.ಈ ವಾಸ್ತವವನ್ನು ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಬಾಬು ರಾಜೇಂದ್ರ ಪ್ರಸಾದ್, ಪ್ರಧಾನಿ ನೆಹರೂ ಹಾಗೂ ಇನ್ನಿತರರೂ ಸಹ ಅಕ್ಷರಶಃ ಒಪ್ಪಿಕೊಂಡು ಇಡೀ ದೇಶ ಅಂಬೇಡ್ಕರ್ ಅವರಿಗೆ ಕೃತಜ್ಞವಾಗಿದೆಯೆಂದು ಭಾವಪರವಶರಾಗಿ ನುಡಿದಿದ್ದರು ಒಂದನ್ನು ಬಿಟ್ಟು ಮತ್ತೊಂದಿರದ ತ್ರಿವಳಿಗಳಾಗಿವೆ ಎಂಬುದನ್ನು ವಿವರಿಸುತ್ತಾರೆ. ಎಲ್ಲರೂ ಅಂಬೇಡ್ಕರ ಅವರ ಹಾದಿಯಲ್ಲಿ ಮಾರ್ಗದಲ್ಲಿ ನಡೆಯಬೇಕೆಂದು ಇಂದು ಬಸವರಾಜ ಭಂಡಾರಿ ದಲಿತ ಸಂಘರ್ಷ ಸಮಿತಿಯ ಮುಖಂಡರು ಹೇಳಿದರು.ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಹಿರಿಯರು ಮತ್ತು ಎಲ್ಲ ಮುಖಂಡರು ಪಟ್ಟಣ ಪಂಚಾಯತಿಯ ಸಿಬ್ಬಂದಿಗಳು ಮತ್ತು ತಹಶೀಲ್ದಾರ್,ವಿವಿಧ ಇಲಾಖೆಯ ಅಧಿಕಾರಿಗಳು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು.ಊರಿನ ಗಣ್ಯರು ಪಟ್ಟಣ ಪಂಚಾಯ್ತಿ ಸದಸ್ಯರು ಅಂಬೇಡ್ಕರ್ ಯುವಕರ ಬಳಗದವರು ದಲಿತ ಎಲ್ಲ ಮುಖಂಡರು ಸಿರವಾರ ಪೊಲೀಸ್ ಠಾಣೆ ಅಧಿಕಾರಿಗಳು,ಅನೇಕರು ಇನ್ನು ಮುಂತಾದವರು ಇದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.