ಕೊಪ್ಪಳ/ಕುಷ್ಟಗಿ:ಕ್ಷಯರೋಗದ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸಿ, ಜಾಗೃತಿಗೊಳಿಸಬೇಕು.ಕ್ಷಯ ರೋಗಿಗಳಿಗೆ ಉತ್ತಮ ಚಿಕಿತ್ಸೆ, ನಮ್ಮವರೆಂಬ ಆತ್ಮೀಯ ಭಾವನೆಯಲ್ಲಿ ಸದಾ ಬೆರೆತು, ಅವರು ಉತ್ತಮ ಜೀವನ ನಡೆಸಲು ಮುಕ್ತ ಅವಕಾಶ ಮಾಡಿಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಅನ್ನಪೂರ್ಣ ಪಾಟೀಲ ಅವರು ಹೇಳಿದರು.
ತಾಲೂಕಿನ ದೋಟಿಹಾಳ ಗ್ರಾಮದ ಶುಖಮುನಿಸ್ವಾಮಿ ಹಳೆಯ ಮಠದ ಆವರಣದಲ್ಲಿ ದಯಾನಂದಪುರಿ ಸಂಘ ಹಾಗೂ ಗಾಯಿತ್ರಿ ಮಹಿಳಾ ಸಂಘ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ನಡೆದ ಕ್ಷಯರೋಗದ ಬಗ್ಗೆ ಜಾಗೃತಿ ಅಭಿಯಾನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕ್ಷಯ ರೋಗ ಸಾಂಕ್ರಾಮಿಕ ರೋಗವಾಗಿದ್ದು, ಲಕ್ಷ್ಮಣ ಕಾಣಿಸಿಕೊಂಡರೆ ತಕ್ಷಣ ಪರೀಕ್ಷೆ, ಸೂಕ್ತ ಚಿಕಿತ್ಸೆ ಪಡೆದು, ವೈದ್ಯರ ಸಲಹೆಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ವಿಚಾರಕ ರವೀಂದ್ರ ನಂದಿಹಾಳ ಅವರು ಮಾತನಾಡಿ ಕ್ಷಯರೋಗದ ಲಕ್ಷಣಗಳು ಕಂಡು ಬಂದವರು ಕೂಡಲೆ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷೆಯನ್ನು ಮಾಡಿಸಬೇಕು ಈ ರೋಗವು ಸಾಂಕ್ರಾಮಿಕ ರೋಗವಾಗಿದ್ದು ಬೇರೆಯವರಿಗೆ ರೋಗ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. 2025 ರೊಳಗೆ ಕ್ಷಯ ಮುಕ್ತ ದೇಶ ನಿರ್ಮಾಣ ಕಾರ್ಯಕ್ಕೆ ಸರ್ವರೂ ಕೈಜೋಡಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಜೀವಿನಿ ಮಹಿಳಾ ಸಂಘದ ಅಧ್ಯಕ್ಷೆ ಮಹಾದೇವಿ ಗೋತಗಿ, ಪೂರ್ಣಿಮಾ ದೇವಾಂಗಮಠ, ಸಲೀಮಾಬೇಗಂ, ಶ್ರೀನಿವಾಸ ಕಂಟ್ಲಿ, ಮಲ್ಲಪ್ಪ ಕೇಣೆದ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು,ಸಂಜೀವಿನಿ ಮಹಿಳಾ ಗುಂಪಿನ ಸದಸ್ಯರು ಸೇರಿದಂತೆ ಇತರರು ಇದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.