ಬೀದರ್:ದಿನಾಂಕ 16/04/2024 ರಂದು ಬೀದರ್ ಲೋಕಸಭಾ ಕ್ಷೇತ್ರದ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಪುಟ್ಟರಾಜು ನಂದೇ ರವರು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ರಾಜ್ಯ ಅಧ್ಯಕ್ಷರಾದ ಶ್ರೀ ಮಾರಸಂದ್ರ ಮುನಿಯಪ್ಪ ಹಾಗೂ ರಾಜ್ಯ ಕಾರ್ಯದರ್ಶಿಗಳಾದ ಆರ್.ಮುನಿಯಪ್ಪ,ವಲಯ ಉಸ್ತುವಾರಿಗಳಾದ ದತ್ತು ಸೂರ್ಯವಂಶಿ,ಜಿಲ್ಲಾಧ್ಯಕ್ಷರಾದ ಕಪಿಲ್ ಗೊಡಬೋಲೇ,ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ:ರೋಹನ್ ವಾಘಮಾರೆ