ಪಿರಿಯಾಪಟ್ಟಣ:ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ಬರಗಾಲ ಬರುತ್ತಿದ್ದು,ಕಳೆದ ಏಳು ತಿಂಗಳಿಂದ ವಿವಿಧ ವಿವಿಧ ಯೋಜನೆಯ ಫಲಾನುಭವಿಗಳಿಗೆ ಹಣ ಹಾಕದೆ ಇರುವ ಕಾಂಗ್ರೆಸ್ ಸರ್ಕಾರ ಪಿಕ್ ಪಾಕೆಟ್ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.
ಪಿರಿಯಾಪಟ್ಟಣದಲ್ಲಿ ನಡೆದ ರೋಡ್‌ಶೋನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯದುವೀರ್ ಒಡಯರ್ ಮಾತಯಾಚನೆ ಮಾಡಿದರು.
ರಾಜ್ಯದಲ್ಲಿ ಬರದಲ್ಲಿ ರೈತರು ತೊಂದರೆಗೆ ಈಡಾಗಿದ್ಧಾರೆ ಒಂದು ಟಿ.ಸಿ.ಹಾಕಲು 2.5ಲಕ್ಷ ರೂ.ವೆಚ್ಚ ಮಾಡುವಂತಾಗಿದೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಬರಗಾಲ ಎದುರಾಗುತ್ತದೆ.ಇದು ರೈತರನ್ನು ಲೂಟಿ ಮಾಡುತ್ತಿದ್ಧಾರೆ,ರೈತರ ಬಗ್ಗೆ ಕಾಳಜಿ ಇಲ್ಲ ರಾಜ್ಯದಲ್ಲಿ ನೀರಾವರಿ ಸಮಸ್ಯೆಗಳನ್ನು ಬಗೆಹರಿಸುವ ಯಾವುದೆ ಕಾರ್ಯಕ್ರಮ ಜಾರಿಮಾಡಿಲ್ಲ,ಹಾಲು ಉತ್ಪಾದಕರಿಗೆ ಕಳೆದ 7 ತಿಂಗಳಿಂದ ಪ್ರೋತ್ಸಾಹ ಧನ ಬಿಡುಗಡೆ ಮಾಡಿಲ್ಲ. ಜನವಿರೋಧಿ ರೈತರಿಗೆ ಅನ್ಯಾಯ ಮಾಡುತ್ತಾ ಬಂದಿದೆ,ಗ್ಯಾರಂಟಿ ಯೋಜನೆಗಳಿಗಾಗಿ ಸಾಲ ಮಾಡಿ ಪ್ರತಿಯೊಬ್ಬರ ಮೇಲೂ ಲಕ್ಷಾಂತರೂ ಸಾಲ ಮಾಡಿದೆ. ತಿಂಗಳಿಗೆ ಮನೆಯವರಿಗೆ 2000 ಕೊಟ್ಟು ಮನೆಯ ಯಜಮಾನ ಉಪಯೋಗಿಸುವ ಮದ್ಯದ ಬಾಟಲಿಯ ಮೇಲೆ ಹೆಚ್ಚಿನ ತೆರಿಗೆ ವಿಧಿಸಿ ಅದೇ ಹಣವನ್ನು ವಸೂಲಿ ಮಾಡುತ್ತಿದೆ.ಇದು ಪಿಕ್‌ಪ್ಯಾಕೇಟ್ ಸರಕಾರವಾಗಿದೆ.ಯದುವೀರ್ ಅತ್ಯಂತ ಸಂಭಾವಿತ ವ್ಯಕ್ತಿಯಾಗಿದ್ದು ಮಾದರಿ ಸಂಸದರಾಗಿ ಕೆಲಸ ಮಾಡುವ ಎಲ್ಲಾ ಅರ್ಹತೆ ಹೊಂದಿದ್ದಾರೆ, ಮತಗಟ್ಟೆಯಲ್ಲಿ ನಮ್ಮ ಪಕ್ಷದ ಚಿಹ್ನೆ ಕಾಣುತ್ತಿಲ್ಲವೆಂದು ಜೆಡಿಎಸ್ ಕಾರ್ಯಕರ್ತರು ಗೊಂದಲಕ್ಕೀಡಾಗುವುದು ಬೇಡ ಕಮಲದ ಗುರುತಿಗೆ ಮತ ನೀಡಿ ನರೇಂದ್ರ ಮೋದಿಯವರು ದೇಶದಲ್ಲಿ ತರುತ್ತಿರುವ ಅತ್ಯಂತ ಉತ್ತಮ ಕಾರ್ಯಕ್ರಮ ನೀಡುತ್ತಿದ್ದಾರೆ.ಹಾಗೆಯೇ ರಾಜರಾದರೂ ಸಾಮಾನ್ಯರಾಗಿ ವರ್ತಿಸುತ್ತಿರುವ ಯದುವೀರ್‌ಒಡೆಯರ್‌ಗೆ ಈ ಭಾರಿ ಜೆಡಿಎಸ್ ಅಭ್ಯರ್ಥಿಗಳು ಕಮಲದ ಗುರುತಿಗೆ ಮತನೀಡಬೇಕು ಎಂದು ಮನವಿ ಮಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ ದೇಶದಲ್ಲಿ ಸುಭದ್ರ ಸರಕಾರ ಆಡಳಿತಕ್ಕೆ ಬರಬೇಕಾದರೆ ಎಲ್ಲರೂ ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕು. ಯದುವೀರ್ ಒಡೆಯರ್ ಅವರನ್ನು ೩ ಲಕ್ಷ ಅಂತರದಿಂದ ಗೆಲ್ಲಿಸಿ ದೇಶದಲ್ಲಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.
ಅಭ್ಯರ್ಥಿ ಯದುವೀರ್ ಒಡೆಯರ್ ಮಾತನಾಡಿ ಬಿಜೆಪಿ ಜೊತೆಜೊತೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿರುವುದು ಸಂತೋಷ ತಂದಿದೆ.ಈ ಬಾರಿ ಎಲ್ಲರೂ ಬಿಜೆಪಿ ಪಕ್ಷಕ್ಕೆ ಮತನೀಡುವ ಮೂಲಕ ನರೇಂದ್ರ ಮೋದಿಯವರಿಗೆ ಹೆಚ್ಚಿನ ಶಕ್ತಿ ನೀಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್‌ಗೌಡ,ಮಾಜಿ ಶಾಸಕರಾದ ಕೆ.ಮಹದೇವ್,ಮೈಮೂಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ರಾಮದಾಸ್,ಜಿಲ್ಲಾ ಕಾರ್ಯದರ್ಶಿ ವಸಂತ್‌ಕುಮಾರ್,ಜಿಲ್ಲಾ ಉಪಾಧ್ಯಕ್ಷ ಕೌಲನಹಳ್ಳಿ ಸೋಮಶೇಖರ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.