ಯಾದಗಿರಿ ಜಿಲ್ಲೆಯ ವಡಗೇರಾ ಸಮೀಪದ ತಡಿಬಿಡಿ ಗ್ರಾಮದ ವಾರ್ಡ್ 4ರಲ್ಲಿ ಚರಂಡಿ ಇಲ್ಲದ ಕಾರಣ ಕೊಳಚೆ ನೀರು,ರಸ್ತೆ ಮೇಲೆ ಹರಿಯುತ್ತಿದ್ದು, ಸಾರ್ವಜನಿಕರು ನಿತ್ಯ ಪರದಾಡುವಂತಾಗಿದೆ. ಸಮರ್ಪಕ ಚರಂಡಿ ನಿರ್ಮಿಸದ ಕಾರಣ ಕೊಳಚೆ ನೀರು ರಸ್ತೆ ಮೇಲೆ ಹರಿದು ಸ್ಥಳೀಯರಿಗೆ ಸಮಸ್ಯೆಯಾಗಿ ಪರಿಣಮಿಸಿದೆ.ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿದ್ದು,ದುರ್ನಾತ ಬೀರುತ್ತಿದೆ.ಸೊಳ್ಳೆ, ನೊಣ,ಕ್ರಿಮಿಕೀಟಗಳ ಹಾವಳಿ ಹೆಚ್ಚಿದೆ,ಇದರ ನಡುವೆ ಜನರು ಓಡಾಡಬೇಕಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿದ್ದು,ದುರ್ನಾತ ಬೀರುತ್ತಿದೆ.ಸೊಳ್ಳೆ, ನೊಣ,ಕ್ರಿಮಿಕೀಟಗಳ ಹಾವಳಿ ಹೆಚ್ಚಿದೆ.ಇದರ ನಡುವೆ ಜನರು ಓಡಾಡಬೇಕಾಗಿದೆ, ಸಾಂಕ್ರಾಮಿಕ ರೋಗಗಳು ಹರಡುತ್ತಿವೆ.ರಸ್ತೆಯಲ್ಲಿ ಸಂಚಾರಕ್ಕೂ ತೊಂದರೆ ಉಂಟಾಗಿದೆಯಲ್ಲದೇ ಈ ರಸ್ತೆ ದಾಟಲು ಜನರು ಪರದಾಡುವ ಸ್ಥಿತಿ ಉಂಟಾಗಿದೆ, ಗ್ರಾಮ ಪಂಚಾಯತಿ ಅಧಿಕಾರಿಗಳು ಕೂಡಲೇ ಪರಿಹಾರ ಕಲ್ಪಿಸಿಕೊಡಬೇಕು,ಶೀಘ್ರ ಬಗೆಹರಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಸಂಗಮೇಶ ತಡಿಬಿಡಿ,ಅಧ್ಯಕ್ಷರು,ರಾಜ್ಯ ರೈತ ಸಂಘ ಹಸೀರು ಸೇನೆ ಗ್ರಾಮ ಘಟಕ ತಡಿಬಿಡಿ ರವರು ಎಚ್ಚರಿಕೆ ನೀಡಿದ್ದಾರೆ.
ವರದಿ:ಶಿವರಾಜ ಸಾಹುಕಾರ ವಡಗೇರಾ