ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಂಸದ ಬಿ.ವೈ.ರಾಘವೇಂದ್ರರವರು ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರಿಗೆ ನಾಮಪತ್ರ ಸಲ್ಲಿಸಿದರು.
ಈ ವೇಳೆ ಪತ್ನಿ ತೇಜಸ್ವಿನಿ ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಶಾರದಾ ಪೂರ್ಯಾನಾಯ್ಕ್, ಗುರುರಾಜ್ ಗಂಟಿಹೊಳೆ,ಬಿಜೆಪಿ-ಜೆಡಿಎಸ್ ಮುಖಂಡರಾದ ಭಾನುಪ್ರಕಾಶ್,ರುದ್ರೇಗೌಡ, ಹರತಾಳು ಹಾಲಪ್ಪ,ಕೆ.ಬಿ.ಅಶೋಕ್ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಗೋಪಿ ವೃತ್ತದ ತನಕ ಬೃಹತ್ ಮೆರವಣಿಗೆ ನಡೆಸಿದರು.ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿವಿಧೆಡೆಯ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
-ಸಂದೀಪ ಯು.ಎಲ್.,ಸೊರಬ