ಕಲಬುರಗಿ:ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಎನ್ನುವ ವಿಧ್ಯಾರ್ಥಿನಿಯ ಕೊಲೆ ಖಂಡನೀಯವಾಗಿದೆ. ಮಾನವ ಕುಲ ತಲೆ ತಗ್ಗಿಸುವಂತಾಗಿದೆ.ಕರ್ನಾಟಕದಲ್ಲಿ ಇತ್ತೀಚೆಗೆ ವಿಶೇಷವಾಗಿ ಕಾಂಗ್ರೆಸ್ ಪಕ್ಷ ಅಧಿಕಾರ ವಹಿಸಿಕೊಂಡ ನಂತರ ಇಂತಹ ಘಟನೆಗಳು ನಡೆಯುತ್ತಿರುವುದು ಖೇದಕರ ಸಂಗತಿಯಾಗಿದೆ ಎಂದು ಭಾರತೀಯ ಜನತಾ ಪಕ್ಷದ ಮುಖಂಡ ಶರಣಕುಮಾರ ಹಾಗರಗುಂಡಗಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,ನೇಹಾ ಕೊಲೆ ಕುರಿತು ಮಾನ್ಯ ಗೃಹಮಂತ್ರಿ ಪರಮೇಶ್ವರ ಅವರು ಕೊಟ್ಟ ಹೇಳಿಕೆ ಮಹಿಳಾ ಕುಲಕ್ಕೆ ಅವಮಾನ ಮಾಡುವಂತಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಆರೋಪಿಗಳ ಪರವಾಗಿ ಹೇಳಿಕೆ ನೀಡುವುದು ಸರಿಯಲ್ಲ ಇದರಿಂದ ಅಪರಾಧಿಗಳಿಗೆ ಶಿಕ್ಷೆ ಕೊಡುವುದನ್ನು ಬಿಟ್ಟು ಪರೋಕ್ಷವಾಗಿ ಬೆಂಬಲಿಸುವ ನೀತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಬಿಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಜೈ ಶ್ರೀರಾಮ ಎಂದು ಘೋಷಣೆ ಕೂಗಿದವರ ಮೇಲೆ ಹಲ್ಲೆ ಮಾಡಿರುವುದು. ಬೆಂಗಳೂರಿನ ಕೆಫೆ ಒಂದರಲ್ಲಿ ಬಾಂಬ್ ಬ್ಲಾಸ್ಟ್ ಮಾಡಿದ ಘಟನೆಗಳು ನಡೆದಿವೆ.ಅಷ್ಟೇ ಯಾಕೆ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ ಘೋಷಣೆ ಕೂಗಲಾಯಿತು.ಇಂತಹ ಘಟನೆಗಳು ಪದೇಪದೇ ನಡೆಯುತ್ತಿರುವುದರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎನ್ನುವುದು ಅರ್ಥವಾಗುತ್ತದೆ ಎಂದು ತಿಳಿಸಿದ್ದಾರೆ.
