ಕಲಬುರಗಿ:ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯನ್ನು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ ಖಂಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಶಿಕ್ಷಣಕ್ಕಾಗಿ ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಸುರಕ್ಷತೆ ಇಲ್ಲದಂತಾಗಿದೆ.ಇದು ಕಾಂಗ್ರೆಸ್ ಸರಕಾರದ ಬೇಜವಾಬ್ದಾರಿ ಆಡಳಿತಕ್ಕೆ ಕೈ ಗನ್ನಡಿಯಾಗಿದೆ.
ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಹಿಂದೂ ಸಮಾಜದ ಮಕ್ಕಳು ಹತ್ಯೆಗೀಡಾಗುತ್ತಿರುವುದು ನಿಜಕ್ಕೂ ದೌಭಾರ್ಗದ್ಯ ಸಂಗತಿ.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಸಮರ್ಥರಾದ ಗೃಹ ಸಚಿವರು ಈ ಕೂಡಲೇ ರಾಜೀನಾಮೆ ನೀಡಬೇಕು.
ಪಾಲಕರು ಸಹ ಶಾಲಾ-ಕಾಲೇಜಿಗೆ ಹೋಗುವ ಮಕ್ಕಳ ಚಲನವಲನ ಕುರಿತು ಜವಬ್ದಾರಿ ವಹಿಸಬೇಕು.ಇಂತಹ ದುಷ್ಕ್ರತ್ಯವನ್ನು ಹಿಂದೂ ಸಮಾಜ ಬಲವಾಗಿ ಖಂಡಿಸುತ್ತದೆ.ಅಪರಾಧಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
