ಕಲಬುರಗಿ:ಹುಬ್ಬಳ್ಳಿಯ ನೇಹಾ ಹೀರೆಮಠ ಕೊಲೆ ಪ್ರಕರಣ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆಯಾಗಿದ್ದು,ಮಹಿಳೆಯರಿಗೆ ತಮ್ಮ ಬದುಕನ್ನು ಕಟ್ಟಿಕೊಳ್ಳುವ ಸ್ವಾತಂತ್ರ್ಯ ಇಲ್ಲದಂತಾಗಿದೆ.ನೇಹಾಳ ಕೊಲೆ ಮಾಡುವ ಮೂಲಕ ವಿಕೃತಿ ಮೆರೆದಿರುವ ಆರೋಪಿಯನ್ನು ಬಂಧಿಸಿದ್ದು ಕಾನೂನು ರೀತಿ ಗಲ್ಲು ಶಿಕ್ಷೆ ವಿಧಿಸಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಹಡಪದ ಅಪ್ಪಣ್ಣ ಸಮಾಜದ ಸದಸ್ಯರು ಮತ್ತು ಕಲಬುರಗಿ ಜಿಲ್ಲೆಯ ಸಂಘಟನಾ ಕಾರ್ಯದರ್ಶಿಗಳು ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ರವರು ರಾಜ್ಯ ಸರ್ಕಾರ ಹಾಗೂ ಪೋಲೀಸ್ ಇಲಾಖೆಗೆ ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಹುಬ್ಬಳ್ಳಿಯಲ್ಲಿ ನಡೆದ ಯುವತಿಯ ಕೊಲೆ ಪ್ರಕರಣ ಇಡಿ ರಾಜ್ಯವೇ ಬೆಚ್ಚಿ ಬೀಳಿಸಿದೆ.ರಾಜ್ಯದಲ್ಲಿ ಮಹಿಳೆಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಡಾ.ಎಂ ಬಿ ಹಡಪದ ಸುಗೂರ ಎನ್ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಹುಬ್ಬಳಿಯಲ್ಲಿ ನಡೆದ ಈ ಬರ್ಬರ ಹತ್ಯೆಯನ್ನು ಪ್ರೇಮ ಪ್ರಕರಣದ ಹಿನ್ನೆಲೆಯಲ್ಲಿ ನಡೆದ ಕೊಲೆ ಎಂದು ಸಾಮಾನ್ಯೀಕರಿಸುವುದು ಸರಿಯಲ್ಲ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಹಾಗೂ ಪೋಲೀಸ ಇಲಾಖೆ ಎಚ್ಚರ ವಹಿಸಬೇಕು ಎಂದು ಅವರು ಹೇಳಿದ್ದಾರೆ.
ರಾಜ್ಯದ ಜನತೆ ಕಂಡ ಕನಸಿನ ಸರ್ವಜನಾಂಗದ ಶಾಂತಿಯ ತೋಟ ಇದೇನಾ? ಎಂದು ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಸಮಾಜದ ಸೇವಕರು ಪ್ರಶ್ನಿಸಿದ್ದಾರೆ.ಆದಷ್ಟು ಬೇಗ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ಡಾ ಎಂ.ಬಿ, ಹಡಪದ ಸುಗೂರ ಎನ್ ಅವರು ಒತ್ತಾಯಿಸಿದ್ದಾರೆ.