ಬೀದರ್ :ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರ ಹತ್ಯೆಯನ್ನು ಖಂಡಿಸಿ ಬೀದರ ತಹಸಿಲ್ದಾರ್ ಕಚೇರಿ ಮುಂಭಾಗ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದವರು ನಡೆಸಿದ ಪ್ರತಿಭಟನೆಯಲ್ಲಿ ಶ್ರೀ ಸಾಗರ್ ಖಂಡ್ರೆ ರವರು ಭಾಗವಹಿಸಿ ಮೇಣದ ಬತ್ತಿ ಹಚ್ಚಿ,ಮೌನಾಚರಣೆ ಮೂಲಕ ನೇಹಾ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ವಿದ್ಯಾರ್ಥಿನಿಯಾದ ಸಹೋದರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ,ಆರೋಪಿ ಯಾರೇ ಆಗಿರಲಿ ಅವರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ಕಾಲೇಜುಗಳಲ್ಲಿ ಯುಜಿಸಿ ಮಾರ್ಗಸೂಚಿ ಅನ್ವಯ ವಿದ್ಯಾರ್ಥಿಗಳಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ತಹಸಿಲ್ದಾರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.ನೇಹಾ ಅವರ ಕುಟುಂಬದ ದುಃಖದಲ್ಲಿ ನಾವು ಕೂಡಾ ಭಾಗಿಯಾಗಿ,ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಇರ್ಫಾನ್ ಖಾನ್ ಹಾಗೂ ಎನ್.ಎಸ್.ಯು.ಐ ಘಟಕದ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ:ರೋಹನ್ ವಾಘಮಾರೆ