ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಕಿತ್ತೂರ ರಾಣಿ ಚನ್ನಮ್ಮ ಸರ್ಕಲ್ ಹತ್ತಿರ ಮಾಜಿ ಶಾಸಕ ಸೈಯದ ಅಜ್ಜಂಪೀರ್ ಖಾದ್ರಿ ಹಾಗೂ ಸಂತೋಷ ಲಾಡ್ ಅಭಿಮಾನಿಗಳಿಂದ ಬೃಹತ್ ಪ್ರತಿಭಟನೆ ಜರುಗಿತು.
ಸಚಿವ ಸಂತೋಷ ಲಾಡ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಹೇಳಿಕೆಯನ್ನ ಖಂಡಿಸುತ್ತೇವೆ ಎಂದು ಶಿಗ್ಗಾವಿ ಸವಣೂರ ಕ್ಷೇತ್ರದ ಮಾಜಿ ಶಾಸಕ ಸೈಯದ ಅಜ್ಜಂಪೀರ್ ಖಾದ್ರಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಶಿಗ್ಗಾವಿ ಪಟ್ಟಣದ ಚನ್ನಮ್ಮನ ವೃತ್ತದಲ್ಲಿ ನೂರಾರು ಕಾರ್ಯಕರ್ತರು,ಅಭಿಮಾನಿಗಳೊಂದಿಗೆ ಪ್ರತಿಭಟನೆ ನಡೆಸಿ ನಂತರ ಅವರು ಮಾತನಾಡಿ ಜವಾಬ್ದಾರಿ ಸ್ಥಾನದಲ್ಲಿ ಇದ್ದ ಅವರು ಇಂತಹ ಪದಗಳನ್ನು ಬಳಸಬಾರದು ಅವರ ಈ ನಡೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಕೂಡಲೇ ಅವರು ರಾಜ್ಯದ ಜನತೆಗೆ ಹಾಗೂ ಸಂತೋಷ ಲಾಡ್ ಅವರ ಅಭಿಮಾನಿ ಬಳಗಕ್ಕೆ ಕ್ಷಮೆ ಕೋರಬೇಕು ಎಂದರು ಅಲ್ಲದೆ ಮರಾಠ ಸಮುದಾಯಕ್ಕೆ ಕ್ಷಮೆ ಕೇಳಬೇಕು ಎಂದು ಮಾಜಿ ಶಾಸಕ ಶ್ರೀ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪ್ರತಿಭಟನೆಯಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಮಾಜಿ ಶಾಸಕ ಖಾದ್ರಿಯವರ ಅಭಿಮಾನಿ ಬಳಗದವರು ಉಪಸ್ಥಿತರಿದ್ದರು.
ಶಿಗ್ಗಾಂವ ವರದಿಗಾರ-ಮಂಜುನಾಥ ಪಾಟೀಲ