ಭದ್ರಾವತಿ:ಭಾರತ ಚುನಾವಣಾ ಆಯೋಗ,ರಾಜ್ಯ ಚುನಾವಣಾ ಆಯೋಗ,ಜಿಲ್ಲಾ ಸ್ವೀಪ್ ಸಮಿತಿ ಶಿವಮೊಗ್ಗ,ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿ ಮತ್ತು ನಗರಸಭೆಯ ಸ್ವೀಪ್ ಸಮಿತಿ ಹಾಗೂ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಶಿವಮೊಗ್ಗ ಇವರುಗಳ ಸಹಯೋಗದಲ್ಲಿ ಮತದಾನ ಜಾಗೃತಿಗಾಗಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ತಾಲ್ಲೂಕು ಪಂಚಾಯಿತಿ ಆವರಣದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ,ನಂತರ ಬಸವೇಶ್ವರ ವೃತ್ತದಲ್ಲಿ ಜಾಥಾ ಉದ್ಧೇಶಿಸಿ ಪೌರಾಯುಕ್ತ ಪ್ರಕಾಶ್ ಎಂ.ಚನ್ನಪ್ಪನವರ್ ಮಾತನಾಡಿ,18 ವರ್ಷ ತುಂಬಿದ ವಿಕಲಚೇತನರು ಸೇರಿದಂತೆ ಎಲ್ಲರೂ ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳಬೇಕು.ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಉತ್ತಮ ನಾಯಕರನ್ನು ಆಯ್ಕೆಮಾಡುವ ಹಕ್ಕು ನಮಗೆ ದೊರೆತಿರುವುದೇ ಪುಣ್ಯ.ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಕೋರಿದರು.
ಚುನಾವಣಾ ಆಯೋಗದ ರಾಯಭಾರಿ ಹಾಗೂ ಅಂತರರಾಷ್ಟ್ರೀಯ ಕ್ರೀಡಾಪಟು ಜ್ಯೋತಿ ಅವರು, ಮತದಾನ ಪ್ರಜಾ ಪ್ರಭುತ್ವದ ಹಬ್ಬ.ವಿಕಲಚೇತನರು ಸಹ ಮತಗಟ್ಟೆಗೆ ತೆರಳಿ, ಕಡ್ಡಾಯವಾಗಿ ಮತದಾನ ಮಾಡೋಣ ಎಂದು ಒಂದು ಎರಡು ಮತಗಟ್ಟೆಗೆ ಹೊರಡು ಎನ್ನುವ ಹಾಡಿನ ಮೂಲಕ ಜಾಗೃತಿ ಮೂಡಿಸುವ ಮೂಲಕ ಸ್ಪೂರ್ತಿ ತುಂಬಿದರು.
ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಗಂಗಣ್ಣ,ನಗರಸಭೆಯ ಸಮುದಾಯ ಸಂಘಟನಾಧಿಕಾರಿ ಸುಹಾಸಿನಿ,ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ಅಧಿಕಾರಿ ಸುರೇಖಾ, ವಿಕಲಚೇತನರ ಸಂಘದ ಅಧ್ಯಕ್ಷ ಕಾಣಿಕ್ ರಾಜ್,ನಗರ ಸಭೆ ಹಾಗೂ ತಾಲ್ಲೂಕು ಪಂಚಾಯಿತಿ ಸ್ವೀಪ್ ತಂಡದವರು,ವಿಕಲಚೇತನರು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.