ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಬಾಲರಾಜ್ ಪರ ಮತಯಾಚಿಸಿದ ಸಿ.ಕೆ. ಕೃಷ್ಣಕುಮಾರ್

ಹನೂರು:ಚಾಮರಾಜನಗರ ಎನ್.ಡಿ.ಎ ಮೈತ್ರಿ ಅಭ್ಯರ್ಥಿಯಾದ ಎಸ್. ಬಾಲರಾಜು ಪರವಾಗಿ ಮತ ಯಾಚನೆ ಮಾಡಲಾಯಿತು.‌ಮಣಗಳ್ಳಿ ಗ್ರಾಮದಲ್ಲಿ ಬಿಜೆಪಿ ಜಿಲ್ಲಾ ಎಸ್ ಸಿ ಮೋರ್ಚಾ ಕಾರ್ಯದರ್ಶಿಯಾದ ಸಿಕೆ ಕೃಷ್ಣಕುಮಾರ್ ಅವರು ಗ್ರಾಮದ ತೋಟ ಹಾಗೂ ಮನೆಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿಯ ಪರ ಮತಯಾಚನೆ ನಡೆಸಿದರು.
ಇದೆ ವೇಳೆ ಬಿಜೆಪಿ ಎಸ್ ಸಿ ಮೋರ್ಚಾ ಕಾರ್ಯದರ್ಶಿಯಾದ ಸಿಕೆ ಕೃಷ್ಣಕುಮಾರ್ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರು ಭಾರತ ದೇಶ ಮೊದಲ ಸ್ಥಾನಕ್ಕೆ ತರಲಿಕ್ಕೆ ಹತ್ತು ವರ್ಷಗಳಿಂದ ಒಂದು ದಿನವೂ ರಜಾ ಹಾಕದೆ ಹಗಲಿರುಳು ಶ್ರಮಿಸುತ್ತಿದ್ದಾರೆ.
ಉಜ್ವಲ ಯೋಜನೆ,ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ ಹಾಗೂ ಇನ್ನಿತರ ಜನಪರ ಯೋಜನೆಗಳನ್ನು ಎಲ್ಲಾ ವರ್ಗದ ಜನರಿಗೋಸ್ಕರ ತಂದಿದ್ದಾರೆ ಅಯೋಧ್ಯದಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಇದ್ದ ಸಂದರ್ಭದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೃತಪಟ್ಟ ಸಂದರ್ಭದಲ್ಲಿ ಅವರನ್ನು ಹೂಳಲಕ್ಕೆ ಜಾಗ ಕೊಟ್ಟಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬರೆದಂತಹ ಸಂವಿಧಾನದ ಅಡಿಯಲ್ಲಿ ನಾವು ಭಾರತ ದೇಶವನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ ಆದರೆ ಕಾಂಗ್ರೆಸ್ ಮುಖಂಡರುಗಳು ಬಿಜೆಪಿ ಸರ್ಕಾರ ಬಂದರೆ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೇ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಹುಟ್ಟಿಬಂದರೂ ಸಂವಿಧಾನ ಬದಲಾವಣೆ ಮಾಡಿ ಅಂದರೂ ಸಹ ನಾವು ಮಾಡೋದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ ಆದರಿಂದ ಕಾಂಗ್ರೆಸ್ ಮುಖಂಡರ ಮಾತನ್ನು ನಂಬಬೇಡಿ.
ಯಡಿಯೂರಪ್ಪ ವಿಜಯೇಂದ್ರ,ದೇವೇಗೌಡರು, ಕುಮಾರಸ್ವಾಮಿ ಅವರ ಆಶೀರ್ವಾದದಿಂದ ಬಾಲರಾಜು ರವರು ಅತ್ಯಧಿಕ ಬಹುಮತಗಳ ಅಂತರದಿಂದ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ. ಆದ್ರಿಂದ ಮತದಾರ ಪ್ರಭುಗಳು ನಿಮ್ಮ ಅಮೂಲ್ಯವಾದ ಮತವನ್ನು ನೀಡಬೇಕೆಂದು ಕೈ ಮುಗಿದ ಬೇಡಿಕೊಳ್ಳುತ್ತೇನೆ ಎಂದು ಮತ ಯಾಚನೆ ಮಾಡಿದರು.
ಇದೇ ಸಂದರ್ಭದಲ್ಲಿ ಮಣಗಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಲ್ಲಿಕಾರ್ಜುನ,ಬಿಜೆಪಿ ಮುಖಂಡರಾದ ಮಾದೇಶ್,ಗೂಳಿ ನಾಯಕ ಹಾಗೂ ಇನ್ನಿತರರು ಹಾಜರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ