ಬೀದರ್:ಲೋಕಸಭೆ ಚುನಾವಣೆ ನಿಮಿತ್ತವಾಗಿ ಬೀದರ್ ಲೋಕಸಭಾ ಕ್ಷೇತ್ರದ ಔರದ್ ತಾಲೂಕಿನ ಚಿಂತಕಿ ಗ್ರಾಮದಲ್ಲಿ ಹಿರಿಯ ಮುಖಂಡರು ಹಾಗೂ ಮಾನ್ಯ ಶ್ರೀ ಈಶ್ವರ್ ಖಂಡ್ರೆ, ಅರಣ್ಯ ಸಚಿವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿಗಳು ಅವರ ನೇತೃತ್ವದಲ್ಲಿ ಸಾರ್ವಜನಿಕ ಸಮಾವೇಶ ಹಮ್ಮಿಕೊಳ್ಳಲಾಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿ, ಬೀದರ್ ಜಿಲ್ಲೆಯ ಔರಾದ ತಾಲೂಕಿನ ಚಿಂತಾಕಿ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಬೀದರ್ ನ ಸರ್ವಾಂಗೀಣ ಪ್ರಗತಿಯೇ ನಮ್ಮ ಧ್ಯೇಯ, ಹಾಲಿ ಸಂಸದರು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ,ಬೀದರ್ ಗೆ ಅನ್ಯಾಯ ಮಾಡಿದ್ದಾರೆ,ಈ ಬಾರಿ ಪ್ರಗತಿಗಾಗಿ ಹಸ್ತದ ಗುರುತಿಗೆ ತಮ್ಮ ಅಮೂಲ್ಯ ಮತ ಚಲಾಯಿಸಿ,ಪ್ರಗತಿಗೆ ಕೈ ಜೋಡಿಸಿ ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಪೌರಾಡಳಿತ ಸಚಿವರಾದ ರಹೀಮ್ ಖಾನ್, ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ ಸಚಿವರಾದ ಶ್ರೀ ಈಶ್ವರ ಖಂಡ್ರೆ,ಚಂದ್ರಕಾಂತ್ ಹಿಪ್ಪಳಗಾವ್ ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ವರದಿ:- ರೋಹನ್ ವಾಘಮಾರೆ