ಕಲಬುರಗಿ: ಕೊಟನೂರ(ಡಿ) ಸಮೀಪದ ಲುಂಬಿಣಿ ಉದ್ಯಾನವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದ ಘಟನೆಗೆ ಸಂಬಂಧಿಸಿದಂತೆ ನ್ಯಾಯಲಯದಿಂದ ಜಾಮೀನಿನ ಮೇಲೆ ಹೊರಗೆ ಬಂದಿದ್ದ ವ್ಯಕ್ತಿಯ ಕುಟುಂಬದ ಸದಸ್ಯರನ್ನು ಥಳಿಸಿದ್ದು ಖಂಡನೀಯ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಮಹಿಳೆಯರು,ಮಕ್ಕಳು ಎನ್ನದೇ ಹಲ್ಲೆ ನಡೆಸಿದವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು.ಪ್ರಕರಣದಲ್ಲಿ ತಪ್ಪು ಮಾಡಿದ್ದು ನಿಜವಾಗಿದ್ದರೆ,ತಕ್ಕ ಶಿಕ್ಷೆಯಾಗಬೇಕು. ಆದರೆ ಪ್ರಕರಣಕ್ಕೆ ಸಂಬಂಧವೇ ಇಲ್ಲದ ಕುಟುಂಬ ಸದಸ್ಯರನ್ನು ಥಳಿಸಿದ್ದು ಯಾವ ನ್ಯಾಯ ಎಂದು? ಅವರು ಪ್ರಶ್ನಿಸಿದರು.ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿರುವುದು ನ್ಯಾಯಲಯಕ್ಕೆ ಅಗೌರವ ತೋರಿದಂತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.ಕೊಟನೂರ(ಡಿ) ಗ್ರಾಮದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದ ಪ್ರಕರಣದ ಆರೋಪಿಯ ಮನೆ ಮೇಲೆ ದಾಳಿ ಮಾಡಿ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ ಘಟನೆಯನ್ನು ಅವರು ತೀವ್ರವಾಗಿ ಖಂಡಿಸಿದ್ದರು.
ಕೂಡಲೇ ಪೋಲಿಸ ಇಲಾಖೆಯೂ ಮಹಿಳೆಯರು ಮತ್ತು ಮಕ್ಕಳು ಎನ್ನದೇ ಹಲ್ಲೆ ನಡೆಸಿದವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.