ಕೊಪ್ಪಳ/ಕುಷ್ಟಗಿ:ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರವು ನುಡಿದಂತೆ ನಡೆದ ಸರ್ಕಾರವಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯೆ ಉಮಾದೇವಿ ಪಾಟೀಲ ಅವರು ಹೇಳಿದರು.
ತಾಲೂಕಿನ ಹನಮನಾಳ,ಕುರುಬನಾಳ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿಯ ಮಹಿಳಾ ಸದಸ್ಯರಿಂದ ಲೋಕಸಭಾ ಚುನಾವಣೆಯ ಅಂಗವಾಗಿ ಗ್ಯಾರಂಟಿ ಕಾರ್ಡಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯ ಮೊದಲು ಕೊಟ್ಟಿರುವ ಭರವಸೆಗಳನ್ನು ಸಿದ್ದರಾಮಯ್ಯನವರು ಮುಖ್ಯ ಮಂತ್ರಿಯಾದ ನಂತರ ಎಲ್ಲಾ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದು ಈ ಗ್ಯಾರಂಟಿಗಳಿಂದಾಗಿ ಕುಟುಂಬಗಳ ಅಭಿವೃದ್ದಿಯತ್ತ ಸಾಗುತ್ತಿದೆ ಎಂದರು.
ಮೇ7 ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಅವರಿಗೆ ಮತವನ್ನು ಹಾಕಿ ಎಂದು ಮನವಿ ಮಾಡಿಕೊಂಡರು.ಈ ಸಂದರ್ಭದಲ್ಲಿ ಶೋಭಾ ಪುರ್ತಗೇರಿ,ಪದ್ಮಾವತಿ ಬಸ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.