ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ದೇಶದ ಭದ್ರತೆಗಾಗಿ ಬಿಜೆಪಿಗೆ ಬೆಂಬಲಿಸಿ:ಮರತೂರಕರ್

ಕಲಬುರಗಿ/ಕಮಲಾಪೂರ:ದೇಶದ ಭದ್ರತೆಗಾಗಿ ಬಿಜೆಪಿ ಬೆಂಬಲಿಸುವುದು ಅವಶ್ಯಕವಾಗಿದೆ.ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರಜೆಗಳಿಗೆ ರಕ್ಷಣೆ ನೀಡಿದ್ದಾರೆ.ಹೀಗಾಗಿ ಮೋದಿ ಆಡಳಿತವನ್ನು ಮತದಾರರು ಬಯಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಹೇಳಿದರು.ತಾಲೂಕಿನ ಮಹಾಗಾಂವ ದಮ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ ಪರವಾಗಿ ಮತಯಾಚಿಸಿ ನಂತರ ಮಾತನಾಡಿದ ಅವರು, ಪ್ರಧಾನಿ ಮೋದಿ ಕೋವಿಡ್ ಅವಧಿಯಲ್ಲಿ ದೇಶದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ಹಾಕಿಸುವ ಮೂಲಕ ಜನಪರ ಕಾಳಜಿ ವಹಿಸಿದ್ದರು.ಹೀಗಾಗಿ ದೇಶದಲ್ಲಿ‌ ಸಾವು,ನೋವು ಸಂಖ್ಯೆ ಕಡಿಮೆಯಾಯಿತು. ಮಹಿಳೆಯರ ಆರೋಗ್ಯದ ಹಿತದೃಷ್ಟಿಯಿಂದ ವಿಶೇಷ ಯೋಜನೆಗಳನ್ನು ರೂಪಿಸಿ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.ಅಲ್ಲದೇ ಮಹಿಳೆಯರಿಗೆ ಮತ್ತು ಯುವಕರಿಗೆ ಉದ್ಯೋಗ ಕಲ್ಪಿಸುವ ಮೂಲಕ ಆರ್ಥಿಕ ಭದ್ರತೆ ನೀಡಿದ್ದಾರೆ.ಅಂತಹ ಪ್ರಧಾನಿಗೆ ಮತ ನೀಡುವ ಮೂಲಕ ಬಹುಮತದಿಂದ ಆಯ್ಕೆ ಮಾಡಲು ಜನ ಮುಂದಾಗಿದ್ದಾರೆ ಮತ್ತೆ ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಳೆದ ಒಂದು ದಶಕದಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರ ಅಭೂತಪೂರ್ವ ಬದಲಾವಣೆಗಳನ್ನು ಕಂಡಿದೆ.ನಮ್ಮ ಕ್ಷೆರತ್ರದಲ್ಲಿ ಕೇಂದ್ರ ಸರಕಾರದ ಯೋಜನೆಗಳ ಫಲಾನುಭವಿಗಳು ತಮ್ಮ ಜೀವನವನ್ನು ಸುಗಮವಾಗಿ ನಡೆಸುತ್ತಿದ್ದಾರೆ.ಕಲಬುರಗಿ ಕ್ಷೇತ್ರದಲ್ಲಿ ಕೇಂದ್ರ ಸರಕಾರದ ಯೋಜನೆಗಳು ಮನೆ ಮನೆಗೂ ತಲುಪಿದೆ ಎಂದರೆ ಅದಕ್ಕೆ ಕಾರಣ ನರೇಂದ್ರ ಮೋದೀಜಿ ಅವರ ಸಮರ್ಥ ನಾಯಕತ್ವ ಮುಂದೆಯೂ ಕ್ಷೇತ್ರದ‌ ಜನರೆಲ್ಲರೂ ತಮ್ಮ ಜೀವನವನ್ನು ಸಂತೋಷದಿಂದ ಮುನ್ನಡೆಸಲು ಬಿಜೆಪಿ ಪಕ್ಷಕ್ಕೆ ಪ್ರಚಂಡ ದಿಗ್ವಿಜಯವನ್ನು ನೀಡಿ ಈ ದೇಶದ ಪ್ರಧಾನ ಸೇವಕರಾದ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು ಎಂದು ಮತಯಾಚಿಸಿದರು.
ಅಹಿಂದ ಮತಗಳು ತನ್ನ ಜೇಬಿನಲ್ಲಿವೆ ಎಂಬ ಭ್ರಮೆ ಕಾಂಗ್ರೆಸ್ ಗೆ ಇದೆ.ಆದರೆ,ಅಹಿಂದ ಒಲವು ಬಿಜೆಪಿ ಮೇಲಿದೆ.ಚುನಾವಣೆ ಗೆಲ್ಲಲು ಕಾಂಗ್ರೆಸ್ ಪಕ್ಷಕ್ಕೆ ಇನ್ನಾವುದೇ ಅಸ್ತ್ರ ಉಳಿದಿಲ್ಲ ಎಂದರು.ಕಾಂಗ್ರೆಸ್ ಪಕ್ಷ ಸುಡುವ ಮನೆ ಇದ್ದಂತೆ.ಅಲ್ಲಿಗೆ ಹೋದವರೆಲ್ಲಾ ಸುಟ್ಟು ಹೋಗುತ್ತಾರೆ.ಕಾಂಗ್ರೆಸ್ ನವರು ಅಲ್ಪಸಂಖ್ಯಾತರು ಮತ್ತು ಹಿಂದೂಳಿದವರನ್ನು ಮತ ಬ್ಯಾಂಕ ಮಾಡಿಕೊಂಡಿದೆಯೇ ಹೊರತು ಅಭಿವೃದ್ಧಿ ಮಾಡುವ ಇಚ್ಛೆ ಹೊಂದಿಲ್ಲ.ಕಾಂಗ್ರೆಸ್ ದಲಿತರನ್ನು ಮತಕ್ಕಾಗಿ ಬಳಸಿಕೊಂಡಿರುವ ಸ್ಪಷ್ಟ ನಿದರ್ಶನಗಳು ನಮ್ಮ ಕಣ್ಣ ಮುಂದೆ ಇವೆ ಎಂದು ಅವರು ಹೇಳಿದರು.ಅಹಿಂದ ಮತದಾರರು ಬಿಜೆಪಿಯತ್ತ ಬರುತ್ತಿದ್ದಾರೆ.ಕೇಂದ್ರದ ಬಿಜೆಪಿ ಸರಕಾರವು ಅಂಬೇಡ್ಕರ ಅವರಿಗೆ ಸಂಬಂಧಿಸಿದ ಪಂಚ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಿತು.ಹೀಗೆ ದಲಿತ, ಹಿಂದುಳಿದ ಸಮುದಾಯಕ್ಕೆ ಬಿಜೆಪಿ ಬೆಂಬಲ ನೀಡುತ್ತಲೇ ಬಂದಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಸಿದ್ದು ಪಾಟೀಲ ದಮ್ಮೂರ,ನಾಗೇಶ ಜಮಾದಾರ,ರೇವಣಸಿದ್ದಯ್ಯ ಸ್ವಾಮಿ ಸೇರಿದಂತೆ ಕಾರ್ಯಕರ್ತರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ