ಕೊಪ್ಪಳ ಲೋಕಸಭಾ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ ಅವರ ಪರ ಮತಯಾಚನೆ ಕಾರ್ಯಕ್ರಮದಲ್ಲಿ ಸಚಿವ ಭೈರತಿ ಸುರೇಶ್ ಅವರು ಮಾತನಾಡಿ,ಬಿಜೆಪಿ ರೈತ ವಿರೋಧಿ ಸರ್ಕಾರವಾಗಿದೆ ಜನಪರ ಆಡಳಿತಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕರೆ ನೀಡಿದರು.ಈ ವೇಳೆ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಮಾತನಾಡಿ ದೇಶದಲ್ಲಿ ನೀರಾವರಿ ಮಾಡಿದ್ದು ಕಾಂಗ್ರೆಸ್ ಸರ್ಕಾರ ಡ್ಯಾಮ್ ಕಟ್ಟಿದ್ದು ಇಂದಿನ ಜನತಾದಳ ಸರ್ಕಾರ ಮಾಡಿರುತ್ತದೆ ಬಿಜೆಪಿಯವರ ಕಾರ್ಯ ಶೂನ್ಯವಾಗಿದೆ,ಬಿಜೆಪಿಯವರು ಮನೆ ಮುರಿಯುವ ಕೆಲಸ ಮಾಡುವುದೇ ಇವರ ಕಾಯಕ, ನರೇಂದ್ರ ಮೋದಿ ಅವರ ಆಡಳಿತ ಜನಪರವಲ್ಲ , ಅಭಿವೃದ್ದಿಗಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ ಅವರಿಗೆ ಮತ ನಿಡಬೇಕು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರು ಮತಯಾಚನೆ ವೇಳೆ ಬಹಿರಂಗ ಸಭೆಯಲ್ಲಿ ಮಾತನಾಡಿದರು.ಈ ವೇಳೆ ಜಿಲ್ಲೆಯ ಪಕ್ಷದ ಮುಖಂಡರು,ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.