ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬಶೆಟ್ಟಹಳ್ಳಿ ಹೋಬಳಿಯ ಚಿಕ್ಕತೇಕಹಳ್ಳಿ ಗ್ರಾಮದಲ್ಲಿ ಫ್ರೆಂಡ್ಸ್ ಕ್ರಿಕೆಟ್ ತಂಡದ ವತಿಯಿಂದ ಆಯೋಜಿಸಿದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಮಂಡಲ್ ಪಂಚಾಯಿತಿ ಅಧ್ಯಕ್ಷ ಟಿ.ವಿ ಶ್ರೀನಿವಾಸರೆಡ್ಡಿ ಅವರು
ಕ್ರಿಕೆಟ್‌ನಲ್ಲಿ ಎಲ್ಲಾ ಯುವಕರನ್ನು ಒಗ್ಗೂಡಿಸುವ ಮೂಲಕ ಐಪಿಎಲ್ ಮಾದರಿಯಲ್ಲಿ ತುಂಬಾ ಅಚ್ಚುಕಟ್ಟಾಗಿ ಕ್ರಿಕೆಟ್ ನಡೆಸಬೇಕು,
ಸ್ನೇಹತ್ವಕ್ಕಾಗಿ ಕ್ರಿಕೆಟ್ ಟೂರ್ನಿ ನಡೆಸುತ್ತಿರುವುದು ನಿಜಕ್ಕೂ ಖುಷಿಯ ವಿಚಾರ.ಊರಿನ ಎಲ್ಲಾ ಯುವಕರು ಯಾವುದೇ ರೀತಿಯ ಗಲಭೆಗಳಿಗೆ ಅವಕಾಶ ನೀಡದೇ ಉತ್ತಮವಾಗಿ ನಡೆಸಿಕೊಂಡು ಹೋಗಿ ವ್ಯವಸ್ಥಾಪಕರು ಉತ್ತಮವಾದ ತೀರ್ಮಾನಗಳನ್ನು ತೆಗೆದುಕೊಂಡು ಟೂರ್ನಿಯನ್ನು ನಡೆಸಿಕೊಂಡು ಹೋಗಿ ಎಂದು ಸಲಹೆ ನೀಡಿದರು.
ಗ್ರಾಮ ಪಂಚಾಯತಿ ಸದಸ್ಯ ಸಿ ವೆಂಕಟೇಶಪ್ಪ ಮಾತನಾಡಿ,ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸಬೇಕು.ಕ್ರೀಡೆಯಿಂದ ಮನಸ್ಸು ಮತ್ತು ದೇಹ ಸದೃಢವಾಗಿರುತ್ತದೆ. ಆಟಗಾರರು ಸೋಲು -ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು. ಯುವಕರು ದೇಶದ ನಿಜವಾದ ಸಂಪತ್ತು.ನಿತ್ಯ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ ಎಂದರು.
ಈ ಸಂದರ್ಭದಲ್ಲಿ ಊರಿನ ಮುಖಂಡರಾದ ಸೀತಾರಾಮಪ್ಪ,ಕೆ.ಮಂಜುನಾಥ್,ಪಿ.ಮಂಜುನಾಥ್, ಇ.ಮಂಜುನಾಥ್,ಟಿಎಸ್ ಪ್ರದೀಪ್ ಕುಮಾರ್, ಕೃಷ್ಣಪ್ಪ ಆರ್,ಸೀತಪ್ಪ,ರವಿ ಸಿ.ಎನ್,ನಾಗೇಶ್,ಪತ್ರಕರ್ತ ಚಿಕ್ಕತೇಕಹಳ್ಳಿ ಡಿ ಶಿವಕುಮಾರ್,ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ ತಂಡದ ಎಲ್ಲಾ ಆಟಗಾರರು,ಗ್ರಾಮಸ್ಥರು ಹಾಗೂ ಇತರೆ ಕ್ರೀಡಾಭಿಮಾನಿಗಳು ಪಾಲ್ಗೊಂಡಿದ್ದರು.
ವರದಿ ಗಗನ್ ಸಾಮ್ರಾಟ್ ಶಿಡ್ಲಘಟ್ಟ