ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮೂರ್ಛೆ ಹೋದ ಕೋಗಿಲೆಯನ್ನು ರಕ್ಷಣೆ ಮಾಡಿ ಚಿಕಿತ್ಸೆ ನೀಡಿ ಅರಣ್ಯ ಇಲಾಖೆಗೆ ಒಪ್ಪಿಸಿದ ವನಸಿರಿ ತಂಡ

ಸಿಂಧನೂರು ತಾಲೂಕಿನ ಎಲೆಕೂಡ್ಲಿಗಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೋಗಿಲೆ(ಪಕ್ಷಿ)ಯೊಂದು ನೀರಿನ ದಾಹವನ್ನು ತೀರಿಸಿಕೊಳ್ಳಲು ನೀರನ್ನು ಹುಡುಕಿ ಹೊರಟಾಗ ಸಂಚರಿಸುವ ಬಸ್ ಗೆ ಡಿಕ್ಕಿ ಹೊಡೆದು ನೆಲಕ್ಕೆ ಬಿದ್ದು ಮೂರ್ಛೆ ಹೋಯಿತು.ಇದನ್ನು ಕಂಡ ಪರಿಸರ ಪ್ರೇಮಿಗಳು ಹಾಗೂ ವನಸಿರಿ ಫೌಂಡೇಶನ್ ಸದಸ್ಯರಾದ ಆನಂದ ಪತ್ತಾರ ಅವರು ಪಕ್ಷಿಯನ್ನು ಕೂಡಲೇ ವನಸಿರಿ ಫೌಂಡೇಶನ್ ಕಾರ್ಯಾಲಯಕ್ಕೆ ತಂದು ಸಂಸ್ಥೆಯ ಸಂಸ್ಥಾಪಕರಾದ ಅಮರೇಗೌಡ ಮಲ್ಲಾಪೂರ ಅವರಿಗೆ ಮಾಹಿತಿ ತಿಳಿಸಿ ಒಪ್ಪಿಸಿದರು ತಕ್ಷಣ ಅದನ್ನು ಪಶುಚಿಕಿತ್ಸಾಲಯಕ್ಕೆ ಹೋಗಿ ಔಷಧಿ ಕೊಡಿಸಿ ಅರಣ್ಯ ಇಲಾಖೆಯ ಅಧಿಕಾರಿ ಮುನಿಸ್ವಾಮಿಯವರಿಗೆ ಒಪ್ಪಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪರಿಸರ ರತ್ನ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಸಂಸ್ಥಾಪಕರಾದ ಅಮರೇಗೌಡ ಮಲ್ಲಾಪೂರ, ಅರಣ್ಯ ಇಲಾಖೆಯ ಅಧಿಕಾರಿ ಮುನಿಸ್ವಾಮಿ,ವನಸಿರಿ ಫೌಂಡೇಶನ್ ಸದಸ್ಯರಾದ ಆನಂದ ಪತ್ತಾರ ಹಾರಾಪೂರ,ಪಂಪಾಪತಿ ಪತ್ತಾರ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು,ಪಶುಚಿಕಿತ್ಸಾಲಯದ ಸಿಬ್ಬಂದಿಗಳು ವನಸಿರಿ ಫೌಂಡೇಶನ್ ಸದಸ್ಯರುಗಳು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!