ತುಮಕೂರು ಜಿಲ್ಲೆಯ ಪಾವಗಡ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದ್ದು ಇಲ್ಲಿನ ಜನರಿಗೆ ಅಗತ್ಯ ಸೌಕರ್ಯಗಳನ್ನು ನೀಡುವಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಪೂಜಾರಪ್ಪ ಆರೋಪಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ತಾಲೂಕ ಘಟಕದಿಂದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟಿಸಿ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರೈತ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಅನೇಕ ಸಂಘ ಸಂಸ್ಥೆಯ ಸದಸ್ಯರು ಗ್ರಾಮೀಣ ಭಾಗದ ರೈತರು ಭಾಗವಹಿಸಿದ್ದರು.
ವರದಿಗಾರರು ಕೊಟ್ಟ ಕರಿಯಣ್ಣ