ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ತಾತ್ಕಾಲಿಕವಾಗಿ ಸ್ಥಗಿತವಾಗಿರುವ ರಸ್ತೆ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತ ಗೊಳಿಸುವಂತೆ ಶಾಸಕ ಎಂ ಆರ್ ಮಂಜುನಾಥ್ ಕೆಶಿಪ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಉಳಿದಿರುವ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೆಸಿಎಫ್ ಅಧಿಕಾರಿಗಳಿಗೆ ಶಾಸಕರು ತಿಳಿಸಿದರು.ಪಟ್ಟಣದ ಮುಖ್ಯ ರಸ್ತೆ ಭರದಿಂದ ಸಾಗಿದ ರಸ್ತೆ ಕಾಮಗಾರಿ ಪಟ್ಟಣದ ನಡುವೆ ಹಾದು ಹೋಗುವ ಮುಖ್ಯ ರಸ್ತೆ ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ತಿಳಿಸಿದರು.
ರಸ್ತೆ ಕಾಮಗಾರಿ ಪ್ರಾರಂಭವಾಗದೆ ಇನ್ನೂ ಕೆಲವು ಕಡೆ ಕಟ್ಟಡ ತೆರವುಗೊಳಿಸುವ ಕಾರ್ಯ ಮಾಡಬೇಕಿದ್ದು ಪೂರ್ಣ ಪ್ರಮಾಣದಲ್ಲಿ ತೆರವುಗೊಳ್ಳುತ್ತಿದ್ದಂತೆ ರಸ್ತೆ ಕಾಮಗಾರಿ ನಡೆಸಲಾಗುವುದು.ಪಟ್ಟಣದ ಮುಖ್ಯ ರಸ್ತೆ ಕಾಮಗಾರಿ ನಡೆಯುತ್ತಿದ್ದು ರಸ್ತೆ ಬದಿ ಅಂಗಡಿ ಮಾಲಿಕರುಗಳಿಗೂ ಕೂಡ ಅಧಿಕಾರಿಗಳಿಗೆ ಉಳಿದಿರುವ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲು ಸಹಕರ ನೀಡಿ ಪಟ್ಟಣದ ಅಭಿವೃದ್ಧಿಗೆ ಸಹಕರಿಸಿ ಎಂದು ಹೇಳಿದರು.
ಕೆಸಿಎಫ್ ರಸ್ತೆ ಕಾಮಗಾರಿ ಪ್ರಾಜೆಕ್ಟ್ ಮ್ಯಾನೇಜರ್ ಮುತ್ತಣ್ಣ,ಮಹಾಂತೇಶ್,ಜೆಡಿಎಸ್ ಪಟ್ಟಣ ಪಂಚಾಯಿತಿ ಸದಸ್ಯರಾದ ಆನಂದ್ ಕುಮಾರ್, ಹಾಗೂ ಮುಖಂಡರುಗಳಾದ ಮಂಜೇಶ್ ಗೌಡ, ಗಿರೀಶ್ ,ಗೋಪಾಲ್ ನಾಯಕ,ಜಯರಾಮು,ಮಹಾದೇವ್,ಎಸ್,ಆರ್ ಮಹಾದೇವ್,ವೆಂಕಟೇಶ್,ಅಮೀನ್,ವೆಂಕಟೇಶ್ ಇನ್ನಿತರರು ಉಪಸ್ಥಿತರಿದ್ದರು.
ವರದಿ:ಉಸ್ಮಾನ್ ಖಾನ್