ಮಳೆಗಾಲದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ತನ್ನ ವ್ಯಾಪ್ತಿಯ ಎಂಟೂ ಜಿಲ್ಲೆಗಳಲ್ಲಿ ಗ್ರಾಹಕರಿಂದ ದೂರುಗಳನ್ನು ಸ್ವೀಕರಿಸಲು ಸಹಾಯವಾಣಿಗೆ ಪರ್ಯಾಯವಾಗಿ ಎಂಟು ಪ್ರತ್ಯೇಕ ವಾಟ್ಸ್‌ಆ್ಯಪ್ ಸಂಖ್ಯೆಗಳನ್ನು ನೀಡಿದೆ. ಈ ಮೂಲಕ ವಿದ್ಯುತ್ ಸಮಸ್ಯೆ ಬಗ್ಗೆ ಗ್ರಾಹಕರು ತಮ್ಮ ಪ್ರದೇಶಕ್ಕೆ ಅನುಗುಣವಾಗಿ ದೂರು ಸಲ್ಲಿಸಬಹುದು.
