ಶಿವಮೊಗ್ಗ:ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2024-25ನೇ ಸಾಲಿಗೆ ವಿಶೇಷ ವಿಕಲಚೇತನ ಯುವಕ/ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ಅಥವಾ ಬೇರೆ ಕಡೆ ಹೋಗಿ ಉದ್ಯೋಗ ಮಾಡಲು ನೆರವಾಗುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದ್ದು,18 ರಿಂದ 40 ವರ್ಷದೊಳಗಿನ ಆಸಕ್ತ ವಿಕಲಚೇತನರಿಂದ ಅರ್ಜಿ ಆಹ್ವಾನಿಸಿದೆ.
ಕಂಪ್ಯೂಟರ್ ತರಬೇತಿ,ಮೊಬೈಲ್ ರಿಪೇರಿ, ತೋಟಗಾರಿಕೆ,ನರ್ಸರಿ,ಬಿಸಿನೆಸ್ ಪ್ರೋಸೆಸ್ ಔಟ್‍ಸೋರ್ಸಿಂಗ್,ಬ್ಯೂಟೀಷಿಯನ್,ಟೈಲರಿಂಗ್, ಹೈನುಗಾರಿಕೆ,ಹೋಂ ನರ್ಸಿಂಗ್ ಹಾಗೂ ಹೋಂ ಅಪ್ಲೈಯನ್ಸ್ ರಿಪೇರ್ ಗಳ ತರಬೇತಿಯನ್ನು ನೀಡಲಾಗುತ್ತಿದ್ದು,ಒಬ್ಬರು 2 ವಿಷಯಗಳನ್ನು ಮಾತ್ರ ಅಯ್ಕೆ ಮಾಡಿಕೊಳ್ಳುವುದು.ತರಬೇತಿ ಅವಧಿಯಲ್ಲಿ ಊಟ,ವಸತಿಯನ್ನು ಉಚಿತವಾಗಿ ನೀಡಲಾಗುವುದು.
ಆಸಕ್ತಿ ಹೊಂದಿರುವ ನಿರುದ್ಯೋಗಿ ವಿಕಲಚೇತನರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ,ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ ರವರಿಂದ ಪಡೆದು,ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಮೇ-20 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.