ಬೀದರ್:ಪಕ್ಷೇತರ ಅಭ್ಯರ್ಥಿ ಪ್ರತಾಪ್ ರೆಡ್ಡಿ ಅವರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಈ ಸಲ ಆಮ್ ಆದ್ಮಿ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ ಎಂದರು.ಪಕ್ಷೇತರ ಅಭ್ಯರ್ಥಿ ಪ್ರತಾಪ್ ರೆಡ್ಡಿ ಅವರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ.ಸಮಾಜ ಸೇವೆ ಮೂಲಕ ಪ್ರತಾಪ್ ರೆಡ್ಡಿ ಗುರುತಿಸಿಕೊಂಡಿದ್ದಾರೆ ಕಳೆದ ಚುನಾವಣೆಯಲ್ಲಿ ಬಹಳ ಕಡಿಮೆ ಅಂತರದಿಂದ ಸೋಲು ಕಂಡಿದ್ದರು ಆದರೆ ಸೋತ ನಂತರವೂ ಜನ ಸಂಪರ್ಕ ಕಳೆದುಕೊಂಡಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಹಾಲಿ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್ ಅವರನ್ನು ಕಣಕ್ಕಿಳಿಸಿದೆ.ಹಿಂದೆ ಬಿಜೆಪಿಯ ಅಮರ್ನಾಥ್ ಪಾಟೀಲ್ ಇದ್ದರು,ಇಬ್ಬರೂ ಒಂದು ದಿನವೂ ಶಿಕ್ಷಕರು ಪದವೀಧರರ ಕುರಿತು ಸದನದಲ್ಲಿ ಮಾತನಾಡಿಲ್ಲ ಈ ಇಬ್ಬರು ಅಭ್ಯರ್ಥಿಗಳಿಗೆ ಹೋಲಿಸಿದರೆ ಪ್ರತಾಪ್ ರೆಡ್ಡಿ ಅವರಿಗೆ ಕ್ಷೇತ್ರದ ಕುರಿತು ಸಾಕಷ್ಟು ತಿಳುವಳಿಕೆ ಇದೆ ಕಳೆದ ಸಲದ ಚುನಾವಣೆಯಲ್ಲಿ ಅವರು ಹೆಚ್ಚಿನ ಮತಗಳು ತಿರಸ್ಕೃತಗೊಂಡಿದ್ದರಿಂದ ಸೋಲು ಕಂಡರು ಪದವೀಧರ ಮತದಾರರು ಸೂಕ್ತ ರೀತಿಯಲ್ಲಿ ಹಕ್ಕು ಚಲಾಯಿಸಬೇಕು ಎಂದು ಮನವಿ ಮಾಡಿದರು.
ಈಶಾನ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರತಾಪ್ ರೆಡ್ಡಿ ಮಾತನಾಡಿ 1977 ರಲ್ಲಿ ನಾನು ಜೆ ಪಿ ಚಳವಳಿಯಿಂದ ಆಕರ್ಷಿತನಾಗಿ ಅವರ ಹಾದಿಯಲ್ಲಿ ಮುನ್ನಡೆದಿದ್ದೇನೆ ಕಾಂಗ್ರೆಸ್ನವರು ಟಿಕೆಟ್ ಕೊಡುವ ಭರವಸೆ ಕೊಟ್ಟು ಹಿಂದೆ ಸರಿದರು.ಹಾಲಿ ಪರಿಷತ್ ಸದಸ್ಯ ಚಂದ್ರಶೇಖರ್ ಪಾಟೀಲ್ ಅವರಿಗೆ ಮಣೆ ಹಾಕಿದ್ದಾರೆ,ಅನೇಕ ಜನ ಪದವೀಧರರು ನನ್ನ ಭೇಟಿ ಮಾಡಿ ನೀವು ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಒತ್ತಡ ಹಾಕಿರುವುದರಿಂದ ಚುನಾವಣೆಗೆ ನಿಂತಿದ್ದೇನೆ ಎಂದರು.
ವರದಿ:ರೋಹನ್ ವಾಘಮಾರೆ