ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಅವರಿಂದ ಪ್ರಗತಿ ಪರಿಶೀಲನ ಸಭೆ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲ್ಲೂಕು ಪಂಚಾಯತ್‌ನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್‌ನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಈಶ್ವರ ಕಾಂದೂ ರವರ ಅಧ್ಯಕ್ಷತೆ ಗುರುವಾರ ವಸತಿ,ಎಸ್‌ಬಿಎಂ,ನರೇಗಾ, ಮಹತ್ವಾಕಾಂಕ್ಷಿ ತಾಲ್ಲೂಕು ಕಾರ್ಯಕ್ರಮ, ಎನ್‌ಆರ್‌ಎಲ್‌ಎಂ,ಜೆಜೆಎಂ ಸೇರಿದಂತೆ ವಿವಿಧ ಯೋಜನೆಗಳ ಹಾಗೂ ಕೃಷಿ,ಶಿಕ್ಷಣ,ಆರೋಗ್ಯ, ಕುಡಿಯುವ ನೀರು ಮತ್ತು ನೈರ್ಮಲ್ಯ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ರವರು ಸಭೆಯಲ್ಲಿ ಹಾಜರಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ,ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ ನರೇಗಾ, ಆರ್‌ಡಬ್ಲ್ಯೂಎಸ್,15ನೇ ಹಣಕಾಸು,ತಾಪಂ,ಗ್ರಾಪಂ ಅನುಧಾನದಲ್ಲಿ ಜಲ ಸಂರಕ್ಷಣಾ ಕಾಮಗಾರಿಗಳಾದ ಕೊಳವೆ ಬಾವಿ ಮರುಪೂರಣ ಘಟಕ,ಮಳೆ ನೀರು ಕೋಯ್ಲು,ಕೆರೆ,ಬಾವಿ,ಕಾಲುವೆ ನಿರ್ಮಾಣದಂತಹ ಕಾಮಗಾರಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೊಳ್ಳಬೇಕು.ಈ ಬಗ್ಗೆ ಸೂಕ್ತ ಕಾರ್ಯಸೂಚಿ ರಚಿಸಿಕೊಂಡು ಸಮರ್ಪಕ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಎಸ್‌ಬಿಎಂ ನಡಿ ಒಡಿಎಫ್ ಫ್ಲಸ್,ಜೆಜೆಎಂ ನಡಿ ಹರ್‌ಗರ್ ಜಲ್ ಘೋಷಣೆ,ಬಿಎಸ್‌ಎನ್‌ಎಲ್ ನೆಟ್ವರ್ಕ್ ಸಂಪರ್ಕ,ಎನ್‌ಆರ್‌ಎಲ್‌ಎಂ ನಡಿ ಮಹಿಳಾ ಸ್ವಸಹಾಯ ಸಂಘಗಳ ನೊಂದಣಿ,ಬ್ಯಾಂಕಿಂಗ್ ಸೆಂಟರ್ ಅವಶ್ಯಕತೆ ಇರುವ ಕಡೆಗಳಲ್ಲಿ ಬಿ.ಸಿ ಸಖಿ ನೇಮಕದ ಬಗ್ಗೆ ಗಮನಹರಿಸಲು ಸೂಚಿಸಿದರು.
ಮಹತ್ವಾಕಾಂಕ್ಷಿ ತಾಲ್ಲೂಕು ಕಾರ್ಯಕ್ರಮದಡಿ ಮುಂಡಗೋಡ ತಾಲ್ಲೂಕಿನಾದ್ಯಂತ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಂಡು ಅರಿವು ಮೂಡಿಸಲು ಪ್ರಾಮುಖ್ಯತೆ ನೀಡಬೇಕು.ಗ್ರಾಮೀಣ ಪ್ರದೇಶದಲ್ಲಿ ಜರುಗುವ ವಿವಿಧ ಕಾರ್ಯಕ್ರಮಗಳಿಂದ ಸಂಗ್ರಹಿಸುವ ಸಾರ್ವಜನಿಕರ ಅನಿಸಿಕೆಗಳ ಆಧಾರದ ಮೇಲೆ ತಾಲ್ಲೂಕಿನಲ್ಲಿ ಆರ್ಥಿಕ ಹಾಗೂ ಆರೋಗ್ಯ ವಿಷಯಗಳಲ್ಲಿ ಉತ್ತಮ ಅಭಿವೃದ್ಧಿ ಸಾಧಿಸಬೇಕು. ಅತ್ಯಂತ ನಿಖರವಾದ ಮಾಹಿತಿ ದಾಖಲಿಕರಣಕ್ಕೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.
ಸಭೆ ಪ್ರಾರಂಭದಲ್ಲಿ ತಾಲ್ಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಟಿ.ವೈ. ದಾಸನಕೊಪ್ಪ ರವರು ತಾಲ್ಲೂಕು ಪಂಚಾಯತಿ ಹಾಗೂ ಗ್ರಾಮ ಪಂಚಾಯತಿ ವಿವಿಧ ಅನುಧಾನ ಹಾಗೂ ಯೋಜನೆಗಳಡಿ ಕೈಗೊಳ್ಳಲಾದ ಕಾಮಗಾರಿಗಳ ಪ್ರಗತಿ ಸಾಧಿಸಿದ ಕುರಿತು ಪಿಪಿಟಿ ಮೂಲಕ ಮೇಲಾಧಿಕಾರಿಗಳಿಗೆ ವಿವರಿಸಿದರು.
ಇದೇ ಸಂದರ್ಭದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ರವರು ಪ್ರಸಕ್ತ ಸಾಲಿನ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೆರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.ಜೊತೆಗೆ ಎನ್‌ಆರ್‌ಎಲ್‌ಎಂ ಯೋಜನೆಯಡಿಯ ವಿವಿಧ ಗ್ರಾಮ ಪಂಚಾಯತಿ ಮಟ್ಟದ ಸ್ವಸಹಾಯ ಸಂಘಗಳ ಮಹಿಳೆಯರಿಂದ ತಯಾರಿಸಿದ ಉಡುಗೊರೆಯಾಗಿ ನೀಡಲು ಯೋಗ್ಯವಾದ ಐದು ಆದಾಯೋತ್ಪನ್ನ ಚಟುವಟಿಕೆಗಳನ್ನು ಒಳಗೊಂಡ ಉಡುಗೊರೆ ಬುಟ್ಟಿಯನ್ನು ಲಾಂಚ್ ಮಾಡಿದರು.
ಸಭೆಯ ನಂತರದಲ್ಲಿ ಚೌಡಳ್ಳಿ,ನಂದಿಕಟ್ಟಾ ಹಾಗೂ ಹುನಗುಂದ ಗ್ರಾಮ ಪಂಚಾಯತಿ,ಪ್ರಾಥಮಿಕ ಆರೋಗ್ಯ ಕೇಂದ್ರ,ನರೇಗಾ ಹಾಗೂ ಜೆಜೆಎಂ ಕಾಮಗಾರಿ ಸ್ಥಗಳಿಗೆ ಭೇಟಿನೀಡಿ ಪರಿಶೀಲಿಸಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಯೋಜನಾಧಿಕಾರಿಗಳಾದ ಶ್ರೀ ವಿನೋದ ಅಣ್ವೇಕರ, ತಾಲ್ಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಟಿ.ವೈ.ದಾಸನಕೊಪ್ಪ,ನರೇಗಾ ಸಹಾಯಕ ನಿರ್ದೇಶಕರಾದ ಶ್ರೀ ಸೋಮಲಿಂಗಪ್ಪ ಛಬ್ಬಿ, ವ್ಯವಸ್ಥಾಪಕರಾದ ಶ್ರೀ ಪ್ರಕಾಶ ಎಂ.ಕೆ.ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು,ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು,ನರೇಗಾ,ಎಸ್‌ಬಿಎಂ ಎನ್‌ಆರ್‌ಎಲ್‌ಎಂ ಅಧಿಕಾರಿಗಳು,ತಾಪಂ ಅಧಿಕಾರಿಗಳು,ಸಿಬ್ಬಂದಿ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ