ಚಾಮರಾಜನಗರ/ಹನೂರು:ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷರಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ನೂತನವಾಗಿ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಉದ್ದುನೂರು ಸಿದ್ದರಾಜು ತಿಳಿಸಿದರು.
ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿ ಮುಂಭಾಗ ಸುದ್ಧಿಗಾರರ ಜೊತೆ ಮಾತನಾಡಿದ ಅವರು
ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು ಸುಮಾರು ಹನೂರು ಕ್ಷೇತ್ರದ ಧೀಮಂತ ನಾಯಕ ದಿವಂಗತ ರಾಜೂಗೌಡರ ಕಾಲದಿಂದಲು ಸಕ್ರಿಯವಾಗಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದು ಪಕ್ಷದ ಕೆಲಸಗಳನ್ನು ಮಾಡುತ್ತಾ ಬಂದಿದ್ದೇನೆ ಅವರ ಕಾಲವಾದ ನಂತರ ಅವರ ಪುತ್ರ ನರೇಂದ್ರ ರಾಜೂಗೌಡ ಅವರ ಜೊತೆ ಮಾರ್ಗದರ್ಶನಲ್ಲಿ ಕೆಲಸ ಮಾಡುತ್ತ ಇದ್ದೀನಿ, ಅದರಂತೆ ವರಿಷ್ಠರು ಕರ್ನಾಟಕ ಜನತೆಯ ಬದುಕಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರ ನೇತೃತ್ವದಲ್ಲಿ ಜಾರಿಯಾಗಿರುವ ಗ್ಯಾರಂಟಿ ಯೋಜನೆಗೆ ನಮ್ಮ ಚಾಮರಾಜನಗರ ಜಿಲ್ಲೆಗೆ ಉಪಾಧ್ಯಕ್ಷರಾಗಿ ನೇಮಕಾ ಮಾಡಿದ್ದಾರೆ,ಇದು ನನಗೆ ಸಂತೋಷಕ್ಕಿಂತ ಜವಾಬ್ದಾರಿ ಹೆಚ್ಚು ಮಾಡಿದೆ ಆ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದರು,ಇದಕ್ಕೆಲ್ಲಾ ಕಾರಣ ಕರ್ತರು ನಮ್ಮ ಪಕ್ಷದ ಮಾಜಿ ಶಾಸಕರಾದ ಆರ್ ನರೇಂದ್ರ ರಾಜೂಗೌಡರು ಹಾಗೆಯೇ ಮುಖಂಡರು ಹಾಗೂ ಕಾರ್ಯಕರ್ತರು ಅವರ ಆಶೀರ್ವಾದದಿಂದಲೆ ನನಗೆ ಈ ಜವಾಬ್ದಾರಿ ಸಿಕ್ಕಿದೆ ಅವರಿಗೆಲ್ಲಾ ನಾನು ತುಂಬು ಹೃದಯದಿಂದ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.
ವರದಿ:ಉಸ್ಮಾನ್ ಖಾನ್
