2024ನೇ ಸಾಲಿನ SSLC/ PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಶಿವಮೊಗ್ಗ:ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಲಾಗುತ್ತಿದೆ.ಆದರಂತೆ 2024ನೇ ಸಾಲಿನ SSLC /ಪಿ.ಯು.ಸಿ.ಪರೀಕ್ಷೆಗಳಲ್ಲಿ ಶೇ.90% ಕ್ಕಿಂತ ಹೆಚ್ಚು ಅಂಕಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲು Online ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನಿಬಂಧನೆಗಳು:
ಶೇ. 90%ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮಾತ್ರ Online ನಲ್ಲಿ ಅರ್ಜಿ ಸಲ್ಲಿಸುವುದು.
2.ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ-ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು ಹಾಗೂ ಸರ್ಕಾರಿ ನೌಕರರ ಸಂಘದ ಸದಸ್ಯರಾಗಿರಬೇಕು.
- ಸಂಘವು ನಿಗಧಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ದೃಢೀಕರಿಸಿOnline ನಲ್ಲಿ Upload ಮಾಡುವುದು.
4.ನಿಗಮ, ಮಂಡಳಿ,ಪ್ರಾಧಿಕಾರ,ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಯ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.
5.ಕೋರಿರುವ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು Upload ಮಾಡದಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
6.SSLC /ಪಿ.ಯು.ಸಿ.ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2024
Online link: https://bit.ly/ksgea2024pp
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22354783/84, 9902135813 ಸಂಪರ್ಕಿಸುವುದು.
ವಿಶೇಷ ಸೂಚನೆ
ಎಸ್.ಎಸ್.ಎಲ್.ಸಿ.ಮತ್ತು ಸಿ.ಬಿ.ಎಸ್.ಸಿ ಫಲಿತಾಂಶ ಪ್ರಕಟಣೆಗೊಂಡ ನಂತರ ವಿದ್ಯಾರ್ಥಿಗಳ ಪೋಷಕರು ಮೇಲಿನ ಲಿಂಕ್ ಮೂಲಕವೇ ಅರ್ಜಿ ಸಲ್ಲಿಸುವುದು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿ: 31-05-2024 ಆಗಿರುತ್ತದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪ್ರಕಟಣೆ ತಿಳಿಸಿದೆ.
ವರದಿ:ಕೊಡಕ್ಕಲ್ ಶಿವಪ್ರಸಾದ್