ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಬ್ಯಾಂಕುಗಳ ವಿರುದ್ಧ ಸಾರ್ವಜನಿಕರಿಂದ ದೂರು ಬರದಂತೆ ಕಾರ್ಯನಿರ್ವಹಿಸಿ:ಜಿಲ್ಲಾಧಿಕಾರಿ ಡಾ.ಸುಶೀಲ.ಬಿ.

ಬರ ಪರಿಹಾರದ ಹಣ ರೈತರ ಸಾಲಕ್ಕೆ ಜಮಾ ಮಾಡಿಕೊಂಡರೆ ಕಾನೂನು ಕ್ರಮ,ಬ್ಯಾಂಕ್‌ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ

ಯಾದಗಿರಿ:ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಬರ ಪರಿಹಾರ,ವಿವಿಧ ಯೋಜನೆಗಳ ಸಹಾಯಧನ, ಸಾಮಾಜಿಕ ನೆರವು ಯೋಜನೆಯ ಸಹಾಯಧನವನ್ನು ರೈತರ ಒಪ್ಪಿಗೆ ಇಲ್ಲದೆ ಸಾಲದ ಖಾತೆಗೆ ಹೊಂದಾಣಿಕೆ ಮಾಡಿಕೊಂಡರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ.ಅವರು ಖಡಕ್ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಬ್ಯಾಂಕುಗಳ ವ್ಯವಸ್ಥಾಪಕರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ರೈತರು,ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಏನಾದರೂ ತಾಂತ್ರಿಕ ದೋಷಗಳಿದ್ದರೆ ತಿಳಿವಳಿಕೆ ಮೂಡಿಸಿ ಇತ್ಯರ್ಥಪಡಿಸಿಬೇಕು.ಬ್ಯಾಂಕುಗಳ ವಿರುದ್ಧ ಸಾರ್ವಜನಿಕರಿಂದ ದೂರು ಬರದಂತೆ ಕಾರ್ಯನಿರ್ವಹಿಸಿ ಎಂದು ಸೂಚಿಸಿದರು.
ಯಾದಗಿರಿ ಜಿಲ್ಲೆಯನ್ನು 2023-24 ನೇ ಸಾಲಿನಲ್ಲಿ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ಅದರಂತೆ ಸರ್ಕಾರದಿಂದ ಬರ ಪರಿಹಾರದ ಮೊತ್ತವನ್ನು ರೈತರಿಗೆ ಪರಿಹಾರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದ್ದು,ಆದರೆ ಕೆಲ ರೈತರು ಬ್ಯಾಂಕ್ ಅಧಿಕಾರಿಗಳು ಸದರಿ ಪರಿಹಾರದ ಮೊತ್ತವನ್ನು ಸಾಲ ರೂಪದಲ್ಲಿ ಕಡಿತಗೊಳಿಸುತ್ತಿರುವುದಾಗಿ ತಿಳಿಸಿರುತ್ತಾರೆ.ಇಂತಹ ಸಮಸ್ಯೆಗಳಿಗೆ ಅಧಿಕಾರಿಗಳು ಅವಕಾಶ ಕೊಡಬಾರದು.
ಈ ನಿಟ್ಟಿನಲ್ಲಿ ಪ್ರಕೃತಿ ವಿಕೋಪದಡಿ ಸಂದಾಯವಾಗುವ ಹಣವನ್ನು ರೈತರ ಸಾಲದ ಖಾತೆಗೆ ಜಮಾ ಮಾಡುವಂತಿಲ್ಲವೆಂದು ಸ್ಪಷ್ಟವಾದ ಸರ್ಕಾರದ ನಿರ್ದೇಶನವಿರುತ್ತದೆ.ಈ ರೀತಿ ಮಾಡಿದಲ್ಲಿ ತಾವುಗಳು ಸರ್ಕಾರದ ನಿದರ್ಶನ ಉಲ್ಲಂಘಿಸಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ.ಆದ್ದರಿಂದ ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ನೋಡಿಕೊಳ್ಳಬೇಕು ಇಲ್ಲವಾದಲ್ಲಿ ತಪ್ಪು ಮಾಡುವ ಬ್ಯಾಂಕ್‌ಗಳ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಸೂಚಿಸಿದರು.
ಡೇ-ನಲ್ಮ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳು ಬ್ಯಾಂಕ್ ಗಳಲ್ಲಿ ಖಾತೆ ತೆರೆಯಲು ನೋಂದಣಿ ಪ್ರಮಾಣ ಪತ್ರ ಅವಶ್ಯಕತೆ ಇರುವುದಿಲ್ಲ ಹೀಗಾಗಿ ಸ್ವ-ಸಹಾಯ ಸಂಘಗಳ ಖಾತೆ ತೆರೆಯಲು ಅವಕಾಶ ಕಲ್ಪಿಸಿ ಕೊಡುವಂತೆ ನಿರ್ದೇಶಿಸಿದರು.
ಪಿ.ಎಂ ಸ್ವನಿಧಿ ಯೋಜನೆಯಡಿಯಲ್ಲಿ ಸಾಲ ನೀಡುವಾಗ ಫಲಾನುಭವಿಗಳಿಗೆ ಯಾವುದೇ ಸ್ಟ್ಯಾಂಪ್ ಶುಲ್ಕ ವಿಧಿಸತಕ್ಕದ್ದಲ್ಲ ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗರಿಮಾ ಪನ್ವಾರ,ಲೀಡ್ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಲೋಕೇಶ್,ಎಸ್.ಬಿ. ಐ ಪ್ರಾದೇಶಿಕ ಕಛೇರಿಯ ಮುಖ್ಯ ವ್ಯವಸ್ಥಾಪಕ ಲೋಯಿಸ್ ಸಿ.ಎಮ್,ಕೆ.ಜಿ.ಬಿ ಕರ್ನಾಟಕ ಗ್ರಾಮೀಣ ಪ್ರಾದೇಶಿಕ ವ್ಯವಸ್ಥಾಪಕ ಗುರುಪ್ರಸಾದ್ ಸ್ವಾಮಿ,ಕೆ.ಜಿ.ಬಿ ಕರ್ನಾಟಕ ರಿಜಿನಲ್ ಆಫೀಸರ್ (ಸಿ.ಎಮ್ ಕ್ರೆಡಿಟ್)ಸುಬೇದಾರ್,ಲೀಡ್ ಬ್ಯಾಂಕ್ ನ ಸಿಬ್ಬಂದಿಗಳಾದ ಕುಮಾರಸ್ವಾಮಿ,ಅಮೀರ್ ಪಟೇಲ್ ಸೇರಿದಂತೆ ಜಿಲ್ಲೆಯ ಎಲ್ಲಾ ಬ್ಯಾಂಕುಗಳ ವ್ಯವಸ್ಥಾಪಕರು ಹಾಗೂ ವಿವಿಧ ಇಲಾಖೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ