ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತೋಟಗಾರಿಕೆ ಇಲಾಖೆಯಿಂದ ರೈತರ ಮಕ್ಕಳಿಗೆ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ:ತೋಟಗಾರಿಕೆ ಇಲಾಖೆಯ ಅಧೀನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ ದಿ:01/07/2024 ರಿಂದ ದಿ: 31/03/2025 ರವರೆಗೆ 10 ದಿನಗಳ ತರಬೇತಿ ಕಾರ್ಯಕ್ರಮವನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾ.ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದು,ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿದ್ದು,ಸ್ವಂತ ಜಮೀನುವುಳ್ಳ ಸಾಗುವಳಿ ಮಾಡುತ್ತಿರುವ ಆಸಕ್ತ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್ https://horticulturedir.karnataka.gov.in ನಿಂದ ಡೌನ್‍ಲೋಡ್ ಮಾಡಿಕೊಂಡು ಅಥವಾ ಜಿಲ್ಲೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕರ ಕಚೇರಿ ಶಿವಮೊಗ್ಗ ಇಲ್ಲಿಂದ ಅಥವಾ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಯಿಂದ ಪಡೆದು,ಭರ್ತಿ ಮಾಡಿದ ಅರ್ಜಿಯನ್ನು ಜೂನ್ 21ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು,ಶಿವಮೊಗ್ಗ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-222794/9686950460 ಗಳನ್ನು ಸಂಪರ್ಕಿಸುವುದು.

ವರದಿ-ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ