ಮುಂಡಗೋಡ:ಲೋಕಸಭಾ ಚುನಾವಣೆ ಮುಗಿದು ಇನ್ನೇನು ಮತಎಣಿಕೆ ಕಾರ್ಯಕ್ಕೆ ದಿನಗಣನೆ ಆರಂಭವಾದ ಬೆನ್ನಲ್ಲೇ ಬಿಜೆಪಿ ಲೋಕಸಭಾ ಚುನಾವಣೆ ಕೆನರಾ ಕ್ಷೇತ್ರದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೆನರಾ ಕ್ಷೇತ್ರದಾದ್ಯಂತ ಅವಲೋಕನ ಸಭೆ ನಡೆಸುತ್ತಿದ್ದಾರೆ.ಅವರು ಮಂಗಳವಾರ ಮುಂಡಗೋಡ ಬಿಜೆಪಿ ಮಂಡಲ ಕಾರ್ಯಾಲಯದಲ್ಲಿ ನಡೆದ ಅವಲೋಕನ ಸಭೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರವಾಗಿ ಕೆಲಸ ಮಾಡಿದ ಕಾರ್ಯಕರ್ತರು,ನಾಯಕರು,ಮುಖಂಡರ ಶ್ರಮದ ಬಗ್ಗೆ ಮಾತನಾಡಿದರು.ಇದೇವೇಳೆ ಪತ್ರಕರ್ತರ ಜೊತೆ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸರಿಸುಮಾರು ಎರಡು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು.ಬಳಿಕ ಚುನಾವಣೆ ಯಶಸ್ವಿಯಾಗಿ ನಡೆಯಲು ಕಾರಣಿಕರ್ತರಾದ ಅಧಿಕಾರಿಗಳು,ಪತ್ರಕರ್ತರು, ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದರು.ಮುಂಡಗೋಡ ಕ್ಷೇತ್ರದಲ್ಲಿ ಒಟ್ಟಾರೆಯಾಗಿ 5000 ಲೀಡ್ ಬರುವ ವಿಶ್ವಾಸ ಇದೆ ಎಂದರು.ರಾಜ್ಯದಲ್ಲಿ ಇನ್ನೂ 10 ವರ್ಷ ಕಾಂಗ್ರೆಸ್ ಅಧಿಕಾರ ದಲ್ಲಿ ಇರಲಿದೆ ಎಂಬ ಡಿಕೆ ಶಿವಕುಮಾರ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಒಳ ಜಗಳದಿಂದ ಕಾಂಗ್ರೆಸ್ ಸರ್ಕಾರ ಪತನ ಆಗಲಿದೆ ಇದನ್ನು ರಾಜ್ಯದ ಜನತೆ ನೋಡುವ ದಿನಗಳು ಹತ್ತಿರವಿದೆ ಎಂದು ಮಾರ್ಮಿಕವಾಗಿ ಭವಿಷ್ಯ ನುಡಿದರು.ಅವಲೋಕನ ಸಭೆ ವೇಳೆ ಮುಂಡಗೋಡ ಬಿಜೆಪಿ ಮಂಡಲ ಅಧ್ಯಕ್ಷ ಮಂಜುನಾಥ್ ಪಾಟೀಲ್, ಜಿಲ್ಲಾ ಕಾರ್ಯಕಾರಣಿ ಯ ಗುರುಪ್ರಸಾದ್ ಹೆಗಡೆ,ಅಶೋಕ್ ಛಲವಾದಿ,ಗುರುರಾಜ್ ಕಾಮತ್, ಸಂತೋಷ್ ತಳವಾರ,ವಿಠ್ಠಲ್ ಬಾಳಂಬಿಡ್ ಇತರರು ಉಪಸ್ಥಿತರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.