ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕು ಕೇಂದ್ರವಾಗಿ ಸುಮಾರು ವರ್ಷಗಳು ಕಳೆದರೂ ಕೂಡಾ ವಡಗೇರಾ ತಾಲೂಕು ಕೇಂದ್ರದಲ್ಲಿ ತಾಲೂಕು ಕಚೇರಿಗಳ ಆರಂಭ ಮಾಡದಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ವಡಗೇರಾ ತಾಲೂಕು ಘಟಕದ ಅಧ್ಯಕ್ಷ ಅಬ್ದುಲ್ ಚಿಗಾನೂರ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ತಾಲೂಕು ಕೇಂದ್ರ ಎಂದು ಘೋಷಣೆಯಾಗಿ ಸುಮಾರು ವರ್ಷಗಳು ಕಳೆದಿವೆ ಇಲ್ಲಿಯವರೆಗೆ ತಾಲೂಕಿಗೆ ಸಂಬಂಧಿಸಿದ ಕಚೇರಿಗಳನ್ನು ತೆರಿಯದೆ ಸಾರ್ವಜನಿಕರ ಕಣ್ಣಿಗೆ ಮಣ್ಣೆರೆಚುತ್ತಿರುವುದು ಸರಿಯಲ್ಲ ಈ ಭಾಗದ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಶಹಾಪೂರಕ್ಕೆ ತೆರಳಬೇಕು ಇದರಿಂದ ತಾಲೂಕಿನ ದೂರದ ಗ್ರಾಮೀಣ ಪ್ರದೇಶದ ರೈತರು ವಿದ್ಯಾರ್ಥಿಗಳಿಗೂ ಸಾರ್ವಜನಿಕರಿಗೂ ತುಂಬಾ ತೊಂದರೆಯಾಗುತ್ತಿದೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಹಲವಾರು ಬಾರಿ ಹೋರಾಟ ಮಾಡಿ ಸಂಬಂಧಿಸಿದ ಅಧಿಕಾರಿಗಳಿಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಕೂಡಲೇ ತಾಲೂಕಿಗೆ ಸಂಬಂಧಿಸಿದ ಕಚೇರಿಗಳನ್ನು ತೇರಿಯಬೇಕು ಎಂದು ಒತ್ತಾಯಿಸಿದ್ದಾರೆ.ಒಂದು ವೇಳೆ ವಿಳಂಬ ಮಾಡಿದ್ದಲ್ಲಿ ನಮ್ಮ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ವತಿಯಿಂದ ಉಗ್ರ ಹೋರಾಟ ಮಾಡುವುದಾಗಿ ವಡಗೇರಾ ತಾಲೂಕು ಘಟಕದ ಅಧ್ಯಕ್ಷ ಅಬ್ದುಲ್ ಚಿಗಾನೂರ ಹಾಗೂ ಸಿದ್ದು ತುಮಕೂರ,ಶರಣು ಗೊಂದೆನೂರ,ಮಲ್ಲು ಜಡಿ, ದೇವು ಬೂಸೇನಿ,ಸತೀಶ್ ಜಡಿ,ಶ್ರೀನಿವಾಸ್ ಮಡಿವಾಳ,ಪೀರ್ ಸಾಬ್ ಮರಡಿ,ಬಸವರಾಜ್ ಬೂಸೇನಿ,ಮಹಮ್ಮದ್ ಕತಾಲಿ,ಬಸವರಾಜ್ ಕೊದ್ದಡ್ಡಿ,ಸುರೇಶ್ ಬಾಡದ,ಸಾಹೇಬರೆಡ್ಡಿ ಹೊರಟುರು ಹಾಗೂ ಇನ್ನಿತರರು ಸರಕಾರಕ್ಕೆ ಎಚ್ಚರಿಸಿದ್ದಾರೆ.
ವರದಿ:ಶಿವರಾಜ ಸಾಹುಕಾರ್,ವಡಗೇರಾ