ರಾಯಚೂರು:ಇಂದು ಸಿಂಧನೂರು ತಾಲೂಕಿನ ದುಗ್ಗಮ್ಮನಗುಂಡ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ಪ್ರಾರಂಭೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಕನಕನಗರ ಸಮೂಹ ಸಂಪನ್ಮೂಲ ವ್ಯಕ್ತಿ ಹನುಮಂತಪ್ಪ ಅವರು ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಕಲಿಕೆಯೊಂದಿಗೆ ಸಂತಸದಾಯಕ ಕಲಿಕೆ ವಾತಾವರಣ ಹೊಂದಿದೆ ಉಚಿತ ಸಮವಸ್ತ್ರ ಉಚಿತ ಪಠ್ಯಪುಸ್ತಕದ ಜೊತೆಗೆ ಹಲವಾರು ಸೌಲಭ್ಯಗಳು ಮಕ್ಕಳಿಗೆ ದೊರೆಯಲಿದೆ ಸರಕಾರಿ ಶಾಲೆಗಳ ಸೌಲಭ್ಯವನ್ನು ತಾವೆಲ್ಲರೂ ಪಡೆಯಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳಾದ ಶಂಕರ ದೇವರು ಹಿರೇಮಠ ಅವರು ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ದಾನಿಗಳು ನೀಡಿದ ಸಾಮಗ್ರಿಗಳನ್ನು,ಕಲಿಕೋಪಕರಣಗಳನ್ನು,ನೋಟ್ ಬುಕ್,ಪೆನ್ ಹಾಗೂ ನೀರಿನ ಬಾಟಲ್ ಗಳನ್ನು ಒಳಗೊಂಡ ಕಿಟ್ ಅನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ದಾನಿಗಳ ಸಹಕಾರ ಅಗತ್ಯವೆಂದು ತಿಳಿಸಿದರು.
ಶಾಲಾ ಪ್ರಾರಂಭೋತ್ಸವದ ಸಂದರ್ಭದಲ್ಲಿ ಮುಖ್ಯ ಅಡಿಗೆಯವರಾದ ರೇಣುಕಾ,ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಗುಡದಪ್ಪ ಹಾಗೂ ಮಾಜಿ ಅಧ್ಯಕ್ಷರಾದ ಲಕ್ಷ್ಮಣ,ಉಪಾಧ್ಯಕ್ಷರಾದ ರೇಣಮ್ಮ ಅವರು,ಅಂಗನವಾಡಿ ಶಿಕ್ಷಕಿ ಭಾಗ್ಯಮ್ಮ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕರಾದ ಪ್ರದೀಪ್ ಕುಮಾರ್ ಅವರು,ಸ್ವಾಗತವನ್ನು ಭಾಗ್ಯಶ್ರೀ, ಸಂಪ್ರೀತ್ ಅವರು ವಂದಿಸಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.